ಭ್ರೂಣ ಹತ್ಯೆ ಆರೋಪಿಗಳಿಗೆ ಸಿಗದ ಜಾಮೀನು

highcourt
Published on

ಬೆಂಗಳೂರು: ಮಂಡ್ಯ ಜಿಲ್ಲೆಯ ಪಾಂಡವಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಕಾನೂನು ಬಾಹಿರವಾಗಿ ಗರ್ಭಪಾತ ಮಾಡುತ್ತಿದ್ದ ಆರೋಪದಡಿ ಬಂಧನದಲ್ಲಿರುವ ವೈದ್ಯ ಸೇರಿ ಐವರು ಆರೋಪಿಗಳಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ಬೆಂಗಳೂರಿನ ಶಾಂತಿನಗರದ ಡಾ. ಎಸ್.ಆದರ್ಶ್ ಹಾಗೂ ಮೈಸೂರು ತಾಲೂಕು ಸಾಲುಂಡಿ ಗ್ರಾಮದ ಶಿವಲಿಂಗನಾಯಕ್ ಸಲ್ಲಿಸಿದ್ದ ಪ್ರತ್ಯೇಕ ನಿರೀಕ್ಷಣಾ ಜಾಮೀನು ಅರ್ಜಿ ಮತ್ತು ಮೇಲುಕೋಟೆ ಹೋಬಳಿ ಮಹದೇಶ್ವರಪುರದ ಎಂ.ಎಸ್. ಕಿರಣ್, ಪಾಂಡವಪುರ ತಾಲೂಕು ಹೊಸಕೋಟೆಯ ಎಚ್.ಪಿ.ಅಖಿಲೇಶ್ ಹಾಗೂ ಕೆ.ಆರ್.ಪೇಟೆಯ ಶ್ರುತಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಜಾಮೀನು ನೀಡಲು ನಿರಾಕರಿಸಿದ್ದಾರೆ.

ಇದೊಂದು ಗಂಭೀರ ಸ್ವರೂಪದ ಪ್ರಕರಣವಾಗಿದ್ದು, ಸಿಐಡಿ ತನಿಖೆಗೆ ವಹಿಸಲಾಗಿದೆ. ಇನ್ನೂ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಹಾಗಾಗಿ, ಈ ಹಂತದಲ್ಲಿ ಜಾಮೀನು ಮಂಜೂರು ಮಾಡಲಾಗದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net