

Jagannath Rath Yatra: ಒಡಿಶಾದ ಪುರಿಯಲ್ಲಿ ಜರುಗಿದ ಅದ್ಧೂರಿ ಜಗನ್ನಾಥ ರಥಯಾತ್ರೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ದಾರುಣ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಇಂದು (ಜೂನ್ 29) ಬೆಳಗಿನ ಜಾವ 4.30ರ ಸುಮಾರಿಗೆ ಪವಿತ್ರ ರಥಗಳು ಗುಂಡಿಚಾ ದೇವಸ್ಥಾನದಲ್ಲಿ ಇದ್ದವು. ಈ ವೇಳೆ ದರ್ಶನಕ್ಕಾಗಿ ದೊಡ್ಡ ಜನಸಮೂಹವೇ ಜಮಾಯಿಸಿತ್ತು. ಜನಸಂದಣಿ ಹೆಚ್ಚಾಗುತ್ತಿದ್ದಂತೆ, ಕಾಲ್ತುಳಿತ ಉಂಟಾಗಿದೆ. ಈ ವೇಳೆ ಕಾಲ್ತುಳಿತಕ್ಕೆ ಸಿಲುಕಿದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಪ್ರಭಾತಿ ದಾಸ್ ಮತ್ತು ಬಸಂತಿ ಸಾಹು ಮತ್ತು 70 ವರ್ಷದ ಪ್ರೇಮಕಾಂತ್ ಮೊಹಂತಿ ಎಂದು ಗುರುತಿಸಲಾಗಿದೆ. ಮೂವರೂ ಖುರ್ದಾ ಜಿಲ್ಲೆಯವರಾಗಿದ್ದು, ರಥಯಾತ್ರೆಗಾಗಿ ಪುರಿಗೆ ಬಂದಿದ್ದರು.
ಕಾಲ್ತುಳಿತದಲ್ಲಿ ತಮ್ಮ ಪತ್ನಿಯನ್ನು ಕಳೆದುಕೊಂಡ ವ್ಯಕ್ತಿ ಮಾತನಾಡಿ, "ಕಠಿಣ ಪರಿಸ್ಥಿತಿಯಲ್ಲಿಯೂ ಯಾವೊಬ್ಬ ಅಧಿಕಾರಿಯೂ ಸ್ಪಂದಿಸಲಿಲ್ಲ. ಈ ಘಟನೆ ಸಂಭವಿಸಿದಾಗ, ಅಗ್ನಿಶಾಮಕ ಅಧಿಕಾರಿಗಳಾಗಲಿ, ರಕ್ಷಣಾ ಪಡೆಯವರಾಗಲಿ, ವೈದ್ಯಕೀಯ ಸಿಬ್ಬಂದಿಗಳೇ ಆಗಲಿ ಯಾರೂ ಸಹ ಪ್ರತಿಕ್ರಿಯಿಸಲಿಲ್ಲ. ಈ ದುರಂತವನ್ನು ವಿವರಿಸಲು ನನ್ನಿಂದ ಸಾಧ್ಯವಿಲ್ಲ. ಇದೊಂದು ಹೃದಯ ಹಿಂಡುವ ಘಟನೆ" ಎಂದು ಭಾವುಕರಾಗಿ ಹೇಳಿದ್ದಾರೆ,(ಏಜೆನ್ಸೀಸ್).