

ನವದೆಹಲಿ: ಚೀನಾದೊಂದಿಗಿನ ವಾಸ್ತವ ಗಡಿರೇಖೆಯ (ಎಲ್ಎಸಿ) ಲಡಾಖ್ ಬಳಿ ಉಂಟಾಗಿರುವ ಬಿಕ್ಕಟ್ಟಿನ ವಿಷಯವನ್ನು ಸಹಿಸಿಕೊಳ್ಳುವ ಮಾತೇ ಇಲ್ಲ. ಈ ವಿಷಯದಲ್ಲಿ ಹೊಂದಾಣಿಕೆಯಂತೂ ಖಂಡಿತ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಸ್ಪಷ್ಟಪಡಿಸಿದ್ದಾರೆ.
ಲಡಾಖ್ ಬಿಕ್ಕಟ್ಟಿನ ಬಗ್ಗೆ ಸೋಮವಾರ ಮೊದಲ ಬಾರಿ ಪ್ರತಿಕ್ರಿಯಿಸಿರುವ ಅವರು, ಬಿಕ್ಕಟ್ಟನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆ ಮುಂದುವರಿದಿದೆ ಎಂದು ಹೇಳಿದರು.
ಲಡಾಖ್ ಮತ್ತು ಉತ್ತರ ಸಿಕ್ಕಿಂ ಭಾಗದಲ್ಲಿ ಚೀನಾ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ನಿಯೋಜಿಸಿದೆ. ಇದಕ್ಕೆ ಪ್ರತಿಯಾಗಿ ಭಾರತ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ನಿಯೋಜಿಸಿದ್ದು, ಅಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ.