

ಬೆಂಗಳೂರು:ಹೇರೋಹಳ್ಳಿ ಕೆರೆ ಹೋರಾಟದ ಸಂದರ್ಭದಲ್ಲಿ ಪಕ್ಷದ ನಾಯಕರುಗಳ ಮೇಲೆ ಸ್ಥಳೀಯ ಶಾಸಕ ಎಸ್. ಟಿ ಸೋಮಶೇಖರ್ ಒತ್ತಡದ ಮೇಲೆ ಪೊಲೀಸರು ಎಎಪಿ ಕಾರ್ಯಕರ್ತರ ಮೇಲೆ ಕ್ರಿಮಿನಲ್ ಮೊಕದ್ದಮೆ ಹಾಕಿದ್ದಾರೆ. ನಗರದ ಕೆರೆಗಳ ಉಳಿವಿಗಾಗಿ ಆಮ್ ಆದ್ಮಿ ಪಕ್ಷ ಎಲ್ಲ ಹೋರಾಟಗಳಿಗೂ ಸಿದ್ಧವಾಗಿದ್ದು, ಈ ರೀತಿಯ ಎಷ್ಟೇ ಕೇಸುಗಳನ್ನು ಹಾಕಿದರೂ ನಾವು ಯಾವುದೇ ಕಾರಣಕ್ಕೂ ಜಗ್ಗುವುದಿಲ್ಲ ಬಗ್ಗುವುದಿಲ್ಲ ಎಂದು ಎಎಪಿ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಹೇಳಿದ್ದಾರೆ.
ಕೆರೆಗಳನ್ನು ಒತ್ತುವರಿ ಮಾಡಿರುವ ರಿಯಲ್ ಎಸ್ಟೇಟ್ ಮಾಫಿಯಾ ಗಳ ವಿರುದ್ಧ ಪಕ್ಷವು ಸಂಪೂರ್ಣ ತೆರವುಗೊಳಿಸುವ ತನಕ ಹೋರಾಟ ಮಾಡುತ್ತದೆ. ಎ್ಲ ಕೆರೆಗಳಲ್ಲಿ ಎಸ್ ಟಿ ಪಿ ಘಟಕಗಳನ್ನು ತೆರೆಯಬೇಕು , ನಾಗರಿಕ ಸೌಲಭ್ಯಕ್ಕಾಗಿ ಶೌಚಾಲಯ ಉತ್ತಮ ಟ್ರ್ಯಾಕ್‌ಗಳು ಕುಡಿಯುವ ನೀರು ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಎಂದು
ಮಾಗಡಿ ರಸ್ತೆಯ ಹೇರೋಹಳ್ಳಿ ಕೆರೆ ವೀಕ್ಷಣೆಯ ನಡೆಸಿ ಸರ್ಕಾರವನ್ನು ಒತ್ತಾಯಿಸಿದರು.
ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಮಾತನಾಡಿ ಇಂದು ಯಶವಂತಪುರ ಕ್ಷೇತ್ರಕ್ಕೆ ಬರಲು ಶಾಸಕರ ವೀಸಾ ಅಗತ್ಯವಾಗಿದೆ. ಸ್ಥಳೀಯ ಸಮಸ್ಯೆಗಳ ಬಗ್ಗೆ ಯಾರೇ ಪ್ರಶ್ನೆ ಮಾಡಿದರೂ ಅವರುಗಳ ಮೇಲೆ ಪೊಲೀಸ್ ಕೇಸುಗಳನ್ನು ಹಾಕಿಸುವ ಮೂಲಕ ಶಾಸಕರು ನಡೆಸುತ್ತಿರುವ ದಬ್ಬಾಳಿಕೆ - ದೌರ್ಜನ್ಯಗಳನ್ನು ಪಕ್ಷವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಜನ ಸಾಮಾನ್ಯರ ಹಿತಕ್ಕಾಗಿ ಪಕ್ಷದ ಕಾರ್ಯಕರ್ತರು ಯಾವುದೇ ತ್ಯಾಗಕ್ಕೂ ಸಿದ್ಧರಾಗಿದ್ದಾರೆ , ಯಶವಂತಪುರ ರಿಪಬ್ಲಿಕ್ ಮಾಡಲು ನಾವು ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್, ಜಗದೀಶ್ ಚಂದ್ರ, ಶಶಿಧರ್ ಆರಾಧ್ಯ , ಡಾ. ದಿನೇಶ್ ಕುಮಾರ್ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಕುಮಾರ್ ಸೇರಿದಂತೆ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.