ಇನ್ಮುಂದೆ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸುವಂತಿಲ್ಲ!; ಕಂಡರೆ 50,000 ರೂ. ದಂಡ: ಬಿಬಿಎಂಪಿ ಆದೇಶ

Untitled design - 2023-08-14T165955.107
Published on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜ್ಯದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸುವುದು ಕಂಡರೆ ಕ್ರಿಮಿನಲ್​ ಕೇಸ್​ ಮತ್ತು 50,000 ರೂ. ದಂಡ ವಿಧಿಸುವುದಾಗಿ ಖಡಕ್ ಆದೇಶ ಹೊರಡಿಸಿದೆ. ಡಿಸಿಎಂ ಡಿ.ಕೆ. ಶಿವಕುಮಾರ್​ ಅವರ ಸೂಚನೆ ಮೇರೆಗೆ ಬಿಬಿಎಂಪಿ ಇದೀಗ ಈ ನಿರ್ಧಾರವನ್ನು ಕೈಗೊಂಡಿದೆ.

ಅನಧಿಕೃತ ಬ್ಯಾನರ್​, ಫ್ಲೆಕ್ಸ್​ ಅಳವಡಿಕೆ ವಿರುದ್ಧ ಅಧಿಕೃತ ಆದೇಶ ಹೊರಡಿಸಿದ ಬಿಬಿಎಂಪಿ, ಬೆಂಗಳೂರಿನಲ್ಲಿ ಗುರುವಾರದಿಂದ ನಗರದ ಸುತ್ತಮುತ್ತಲಿನ ಯಾವುದೇ ಪ್ರದೇಶಗಳಲ್ಲಿ ಬ್ಯಾನರ್, ಪೋಸ್ಟರ್​ ಹಾಕುವಂತಿಲ್ಲ. ಈ ನಿಯಮ ಉಲ್ಲಂಘಿಸುವವರಿಗೆ 50,000 ರೂ. ಮೊತ್ತದ ಭಾರೀ ದಂಡವನ್ನು ವಿಧಿಸಲಾಗುತ್ತದೆ. ಫೈನ್​ ವಸೂಲಿ ಮಾಡುವಂತೆ ಇಲಾಖೆಯ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕೃತ ಆದೇಶ ನೀಡಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್​ ಅವರು ಕೊಟ್ಟ ಸೂಚನೆ ಮೇರೆಗೆ ಈ ಆದೇಶ ಹೊರಡಿಸಲಾಗಿದೆ ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ. ಆಗಸ್ಟ್ 17 ರಿಂದ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗುತ್ತದೆ. ಕ್ರಿಮಿನಲ್ ಕೇಸ್ ಜತೆಗೆ 50 ಸಾವಿರ ರೂ. ದಂಡ ವಸೂಲಿ ಮಾಡಲಾಗುತ್ತದೆ ಎಂದು ಇಲಾಖೆ ಸೂಚಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net