ರಸ್ತೆಗಳಲ್ಲಿ ನಮಾಜ್ ಮಾಡುವಂತಿಲ್ಲ: ಬಕ್ರೀದ್​ಗೂ ಮುನ್ನ ಹೊರ ಬಿತ್ತು ಮಹತ್ತರ ಆದೇಶ

Bakri Eid
Published on

ಉತ್ತರಪ್ರದೇಶ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಬಕ್ರೀದ್​ಗೂ ಮಹತ್ತರವಾದ ಆದೋಶ ಹೊರಡಿಸಿದ್ದಾರೆ. ಬಕ್ರೀದ್ ನಿಮಿತ್ತ ರಸ್ತೆಗಳಲ್ಲಿ ನಮಾಜ್  ಮಾಡುವಂತಿಲ್ಲ ಮತ್ತು ಗೊತ್ತುಪಡಿಸದ ಸ್ಥಳಗಳಲ್ಲಿ  ಮಾತ್ರ ಅವಕಾಶ ಇರುತ್ತದೆ. ಪ್ರಾಣಿ ಬಲಿ ನೀಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಬಕ್ರೀದ್‌ನಲ್ಲಿ ಬಲಿದಾನ ಮಾಡುವ ಸ್ಥಳವನ್ನು ಮೊದಲೇ ಗುರುತಿಸಬೇಕು. ಇತರ ಸ್ಥಳಗಳಲ್ಲಿ ಮಾಡಬಾರದು. ವಿವಾದಿತ ಅಥವಾ ಸೂಕ್ಷ್ಮ ಸ್ಥಳಗಳಲ್ಲಿ ಬಲಿ ನೀಡಬಾರದು. ನಿಷೇಧಿತ ಪ್ರಾಣಿಗಳನ್ನು ಬಲಿ ಕೊಡದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಬಲಿದಾನದ ನಂತರ ತ್ಯಾಜ್ಯ ವಿಲೇವಾರಿಗೆ ವ್ಯವಸ್ಥಿತ ಯೋಜನೆಯನ್ನು ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭಿಸಬೇಕು ಎಂದು ಯೋಗಿ ಆದಿತ್ಯನಾಥ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಐಎಎನ್ಎಸ್ ವರದಿ ಮಾಡಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಡಳಿತ ಅಧಿಕಾರಿಗಳು ಮತ್ತು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಮುಂಬರುವ ಹಬ್ಬದ ತಿಂಗಳಲ್ಲಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಬಲವಾದ ಹಿಡಿತವನ್ನು ಕಾಯ್ದುಕೊಳ್ಳುವಂತೆ ಯೋಗಿ ಆದಿತ್ಯನಾಥ್ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಹಿಂದೂಗಳು ಜೂನ್ 16 ರಂದು ಗಂಗಾ ದಸರಾವನ್ನು ಆಚರಿಸಿದರೆ, ಮುಸ್ಲಿಮರು ಜೂನ್ 17 ರಂದು ಬಕ್ರಿ ಈದ್ ಅನ್ನು ಆಚರಿಸುತ್ತಾರೆ, ನಂತರ ಜುಲೈ 22 ರಂದು ಹಿಂದೂ ಭಕ್ತರು ಕನ್ವರ್ ಯಾತ್ರೆಯನ್ನು ಪ್ರಾರಂಭಿಸುತ್ತಾರೆ. ಭಕ್ತಾದಿಗಳ ಸೌಲಭ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಯೋಗಿ ಆದಿತ್ಯನಾಥ್ ಹೇಳಿದರು. ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಈ ಅವಧಿ ಅತ್ಯಂತ ಸೂಕ್ಷ್ಮವಾಗಿದೆ. ಸರ್ಕಾರ ಮತ್ತು ಆಡಳಿತವು 24×7 ಕ್ರಿಯಾಶೀಲ ಕ್ರಮದಲ್ಲಿರಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net