

ಬೆಂಗಳೂರು: 2025ರ ಜ.8ರಂದು ರಾಕಿಂಗ್ಸ್ಟಾರ್(Yash) ಜನ್ಮದಿನವಿದ್ದು, ಇದರ ಪ್ರಯುಕ್ತ ತಮ್ಮ ಅಭಿಮಾನಿಗಳಗೆ ವಿಶೇಷ ಸಂದೇಶವೊಂದನ್ನು ನಟ ಯಶ್ ಹಂಚಿಕೊಂಡಿದ್ದಾರೆ.
ಶೂಟಿಂಗ್ ನಾನು ಹಿನ್ನೆಲೆ ಬೇರೆಕಡೆ ತೆರಳುತ್ತಿದ್ದು, ಹುಟ್ಟುಹಬ್ಬದಂದು ನಾನು ಊರಲ್ಲಿ ಇರುವುದಿಲ್ಲ. ಹೀಗಾಗಿ, ಯಾವುದೇ ಆಡಂಬರವಿಲ್ಲದೆ ನನ್ನ ಜನ್ಮದಿನವನ್ನು ಆಚರಿಸುವಂತೆ ತಮ್ಮ ಎಕ್ಸ್ ಖಾತೆಯಲ್ಲಿ ಮನವಿ ಪತ್ರವೊಂದು ಹಂಚಿಕೊಂಡು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
''ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿ ಇರಲಿ ಎಂಬುದು ನನ್ನ ಪ್ರೀತಿಯ ಮನವಿ. ಹಾಗಾಗಿ ಫ್ಲೆಕ್ಸ್, ಬ್ಯಾನರ್ಗಳ ಯಾವುದೇ ಆಡಂಬರ ಮಾಡದೇ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೇ ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ. ಆದಷ್ಟು ಬೇಗ ನಿಮ್ಮನ್ನೆಲ್ಲ ಭೇಟಿ ಆಗುತ್ತೇನೆ. ಎಲ್ಲರಿಗೂ ಹೊಸ ವರ್ಷ ಒಳಿತನ್ನು ತರಲಿ'' ಎಂದು ಯಶ್ ಪೋಸ್ಟ್ ಮಾಡಿದ್ದಾರೆ.
ಯಶ್ ಸಿನಿಮಾ ವಿಚಾರಕ್ಕೆ ಬರವುದಾದರೆ ಟಾಕ್ಸಿಕ್ ಸಿನಿಮಾದ ಕೆಲಸಗಳು ಯಶ್ ಬ್ಯೂಸಿ ಇದ್ದಾರೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಹೀಗಾಗಿ, ಬರ್ತ್ಡೇ ಪ್ರಯುಕ್ತ ಟಾಕ್ಸಿಕ್ ಚಿತ್ರತಂಡದಿಂದ ಹೊಸ ಅಪ್ಡೇಟ್ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.