ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್​ 370 ವಾಪಾಸು ತರಲು ಯಾವುದೇ ಶಕ್ತಿಯಿಂದಲೂ ಸಾಧ್ಯವಿಲ್ಲ; ಬಿಜೆಪಿ

370
Published on

ಶ್ರೀನಗರ: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡಿದ್ದ ಆರ್ಟಿಕಲ್​ 370 ಅನ್ನು ವಾಪಾಸು ಜಾರಿಗೊಳಿಸಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸೈಯದ್​ ಶಾನವಾಜ್​ ಹುಸೇನ್​ ಹೇಳಿದ್ದಾರೆ.

370ನೇ ಪರಿಚ್ಛೇದ ರದ್ದತಿ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿಲ್ಲ. ಹಾಗಿದ್ದರೂ ಕೆಲವರು ಸುಪ್ರೀಂ ಕೋರ್ಟ್​ಗೆ ಹೋಗಿದ್ದಾರೆ. ನಿಯಮ ಉಲ್ಲಂಘನೆಯಾಗಿಲ್ಲ ಎಂದು ಸುಪ್ರೀಂ ಕೋರ್ಟ್​ ಸ್ಪಷ್ಟನೆ ಕೊಟ್ಟಿದೆ. ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದಾಗಿದೆ. ಅದನ್ನು ವಾಪಾಸು ಕೊಡುವ ಮಾತೇ ಇಲ್ಲ. ಯಾವ ಶಕ್ತಿಯಿಂದಲೂ ಅದು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಇಲ್ಲಿನ ಕೆಲ ರಾಜಕಾರಣಿಗಳು ಸ್ವಜನ ಪಕ್ಷಪಾತಿಗಳಾಗಿದ್ದು, ತಮ್ಮ ಕುಟುಂಬ ಸದಸ್ಯರ ಉದ್ಧಾರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ಜನರು ಮಾತ್ರ ಬಡವರಾಗಿಯೇ ಉಳಿದಿದ್ದಾರೆ. ಮೋದಿಯವರ ಸಬ್​ ಕಾ ಸಾಥ್​ ಸಬ್​ ಕಾ ವಿಕಾಸ್​ ಮಂತ್ರ ಪಾಲಿಸುತ್ತಾರೆ. ಇಲ್ಲಿನ ಜನ ಅದರ ಮೇಲೆ ನಂಬಿಕೆ ಇರಿಸಲಾರಂಭಿಸಿದ್ದಾರೆ ಎಂದು ಸೈಯದ್​ ಅವರು ಹೇಳಿದ್ದಾರೆ. ಮುಂಬರುವ ಜಿಲ್ಲಾ ಅಭಿವೃದ್ಧಿ ಪರಿಷತ್​ (ಡಿಡಿಸಿ) ಚುನಾವಣೆಗೆ ಚಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಈ ಮಾತನ್ನು ಹೇಳಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net