

ಬೆಂಗಳೂರು : ಕರೊನಾ ಸೋಂಕಿನ ಪ್ರಮಾಣ ಇಳಿಸುವುದಕ್ಕೆ ಸರ್ಕಾರ ಟೆಸ್ಟಿಂಗ್ ಸಂಖ್ಯೆ ಕಡಿಮೆ ಮಾಡಿದೆ ಎಂಬ ಆರೋಪಕ್ಕೆ ಉತ್ತರ ನೀಡಿರುವ ರಾಜ್ಯ ಕಂದಾಯ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ಟೆಸ್ಟಿಂಗ್ ಕಡಿಮೆ ಮಾಡಿ ಎಂದು ಯಾವುದೇ ಲಿಖಿತ ಅಥವಾ ಮೌಖಿಕ ಅದೇಶ ಹೊರಡಿಸಿಲ್ಲ ಎಂದಿದ್ದಾರೆ.
ಈ ಮುಂಚೆ ಬಸ್ ಸ್ಟ್ಯಾಂಡ್ಗಳಲ್ಲಿ, ಮಾಲ್ಗಳಲ್ಲಿ, ಅಪಾರ್ಟ್ಮೆಂಟ್ಗಳಲ್ಲಿ ಪರೀಕ್ಷೆ ಮಾಡುತ್ತಿದ್ದರು. ಆದರೆ ಲಾಕ್ಡೌನ್ ಇರುವುದರಿಂದ ಇಲ್ಲೆಲ್ಲಾ ಟೆಸ್ಟ್ ಮಾಡ್ತಾ ಇಲ್ಲ. ಆಸ್ಪತ್ರೆಗಳಲ್ಲಿ ಮುಂತಾದೆಡೆ ಟೆಸ್ಟಿಂಗ್ ಎಂದಿನಂತೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. ಟೆಸ್ಟಿಂಗ್ ಕಡಿಮೆ ಮಾಡಿ ಎನ್ನುವವರನ್ನು ಮುಲಾಜಿಲ್ಲದೇ ಸಸ್ಪೆಂಡ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.