ದೀಪಾವಳಿಗೆ ವಿದ್ಯುತ್ ವ್ಯತ್ಯಯ ಇಲ್ಲ; ಹಬ್ಬ ಮುಗಿಯುವವರೆಗೂ ದುರಸ್ತಿ ಕಾರ್ಯ ಬೇಡ ಎಂದ ಬೆಸ್ಕಾಂ ಎಂ.ಡಿ

Bescom
Published on

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಯಾವುದೇ ರೀತಿಯ ವಿದ್ಯುತ್ ವ್ಯತ್ಯಯವಾಗದಂತೆ ಗಮನ ಹರಿಸಲು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೆಸ್ಕಾಂ ವ್ಯಾಪ್ತಿಯಲ್ಲಿರುವ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ನಗರ ಸಭೆ, ನಗರ ಪಾಲಿಕೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯ ಗ್ರಾಹಕರಿಗೆ ಯಾವುದೇ ರೀತಿಯ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಕ್ರಮ ಕೈಗೊಳ್ಳಬೇಕೆಂದು ಬೆಸ್ಕಾಂ ಎಂಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದೀಪಾವಳಿ ಹಬ್ಬ ಮುಗಿಯುವವರೆಗೂ ಯಾವುದೇ ವಿದ್ಯುತ್‌ ಮಾರ್ಗಗಳ ದುರಸ್ತಿ, ಜೋಡಣೆ ಹಾಗೂ ಮಾರ್ಗ ಮುಕ್ತತೆ (ಲೈನ್‌ ಕ್ಲಿಯರೆನ್ಸ್‌) ಕಾರ್ಯ ಕೈಗೆತ್ತಿಕೊಳ್ಳದಂತೆ ಹಾಗೂ ವಿದ್ಯುತ್ ಸರಬರಾಜಿನಲ್ಲಿ ಯಾವುದೇ ರೀತಿಯ ವ್ಯತ್ಯಯ ಕಂಡುಬಂದಲ್ಲಿ ತಕ್ಷಣವೇ ಅವುಗಳನ್ನು ಸರಿಪಡಿಸಲು ನಿರ್ದೇಶನ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net