ಆಯುಷ್ ಇಲಾಖೆ ಮುಚ್ಚುವ ಪ್ರಸ್ತಾವನೆ ಇಲ್ಲ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

highcourt
Published on

ಬೆಂಗಳೂರು: ಆಯುಷ್ ಇಲಾಖೆ ಮುಚ್ಚುವ ಪ್ರಸ್ತಾವನೆ ಇಲ್ಲ. ಆಡಳಿತ ವ್ಯವಸ್ಥೆ ಸುಧಾರಿಸಲು ಆಂತರಿಕವಾಗಿ ಮಾರ್ಪಾಡು ಮಾಡಲಾಗುವುದು ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಮೌಖಿಕವಾಗಿ ತಿಳಿಸಿದೆ.

ಔಷಧಿಗಳ ಅಮಲುಜಾರಿ ವಿಭಾಗ ಮತ್ತು ಪರೀಕ್ಷಾ ಪ್ರಯೋಗಾಲಯವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಜತೆ ವಿಲೀನಗೊಳಿಸುವುದಕ್ಕೆ ಆಕ್ಷೇಪಿಸಿ ರಾಜ್ಯ ಔಷಧ ಉತ್ಪಾದಕರ ಸಂಘ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಬಿ.ಎಂ ಶ್ಯಾಮ್ ಪ್ರಸಾದ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಹಾಲಿ ಇರುವ ಆಯುಷ್ ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ ಯಾವುದೇ ವಿಲೀನ ನಡೆಸುವುದಿಲ್ಲ ಎಂದು ಸರ್ಕಾರ ಹೇಳಿದೆ. ರಾಜ್ಯ ಔಷಧ ಉತ್ಪಾದಕರ ಸಂಘದ ಸದಸ್ಯರ ಸ್ಥಳಗಳ ಪರಿಶೀಲನೆಗೆ ಅರ್ಹ ಇನ್‌ಸ್ಪೆಕ್ಟರ್ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಅಫಿಡವಿಟ್ ಸಲ್ಲಿಸಲು ಸ್ವತಂತ್ರವಾಗಿದೆ ಎಂದು ನ್ಯಾಯಾಲಯ ಆದೇಶಿಸಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net