ಇನ್ನು ಮುಂದೆ ಬೀದಿಬದಿಯಲ್ಲಿ ಧಾರ್ಮಿಕ ಆಚರಣೆ ಮಾಡುವಂತಿಲ್ಲ: ಸಿಎಂ ಯೋಗಿ ಖಡಕ್​ ವಾರ್ನಿಂಗ್​

Yogi
Published on

ಝಾನ್ಸಿ: ಬೀದಿಯಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ಆದೇಶ ಹೊರಡಿಸಿದ್ದಾರೆ.

ಆಯಾ ಧಾರ್ಮಿಕ ಸಮಾರಂಭಗಳು ಆಯಾ ಕೇಂದ್ರಗಳ ವ್ಯಾಪ್ತಿಯಲ್ಲೇ ಆಚರಣೆ ಮಾಡಬೇಕಿದೆ. ಅದು ಬಿಟ್ಟು ಬೀದಿಬದಿಗಳಲ್ಲಿ ಮಾಡುವುದಕ್ಕೆ ಅವಕಾಶ ನೀಡಬೇಡಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಯಾರು ಈ ರೀತಿಯ ಆಚರಣೆಗಳಿಗೆ ಅವಕಾಶ ನೀಡಬಾರದು. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರಿಗೆ ಹೇಳಿದ್ದಾರೆ.

ಇನ್ನು ಇತ್ತೀಚೆಗೆ ಭಾರೀ ಸದ್ದು ಮಾಡಿದ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅವರು, ಪೊಲೀಸರು ತನಿಖೆ ವಿಳಂಬ ಮಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಶೀಘ್ರ ತನಿಖೆ ನಡೆಸಬೇಕೆಂದು ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net