ಕಾಲೇಜುಗಳಲ್ಲಿ ಬಿಎ ಕೋರ್ಸ್‌ಗೆ ನೋ ಟೇಕರ್ಸ್

ವಿದ್ಯಾರ್ಥಿಗಳ ಕೊರತೆಯಿಂದಾಗಿ ಮಂಗಳೂರು ವಿಶ್ವವಿದ್ಯಾಲಯ ಸಂಯೋಜನೆಗೆ ಒಳಪಟ್ಟಿರುವ ಮೂರು ಪ್ರಮುಖ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನಿಂದ ಬ್ಯಾಚುಲರ್ ಆಫ್ ಆರ್ಟ್ಸ್ ಕೋರ್ಸ್‌ಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ವಿದ್ಯಾರ್ಥಿಗಳ ಕೊರತೆಯಿಂದಾಗಿ ಮಂಗಳೂರು ವಿಶ್ವವಿದ್ಯಾಲಯ ಸಂಯೋಜನೆಗೆ ಒಳಪಟ್ಟಿರುವ ಮೂರು ಪ್ರಮುಖ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನಿಂದ ಬ್ಯಾಚುಲರ್ ಆಫ್ ಆರ್ಟ್ಸ್ ಕೋರ್ಸ್‌ಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
Published on
ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದಾಗಿ ಮಂಗಳೂರು ವಿಶ್ವವಿದ್ಯಾಲಯ ಸಂಯೋಜನೆಗೆ ಒಳಪಟ್ಟಿರುವ ಮೂರು ಪ್ರಮುಖ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನಿಂದ ಬ್ಯಾಚುಲರ್ ಆಫ್ ಆರ್ಟ್ಸ್ ಕೋರ್ಸ್‌ಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಕಲಾ ವಿಭಾಗದತ್ತ ವಿದ್ಯಾರ್ಥಿಗಳು ಮುಖ ಮಾಡದಿರುವುದೇ ಇದಕ್ಕೆ ಪ್ರಮುಖ ಕಾರಣ.
ಸೋಮವಾರ ಆನ್‌ಲೈನ್ ಮೂಲಕ ನಡೆದ ಮಂಗಳೂರು ವಿವಿಯ ಪ್ರಸಕ್ತ ಸಾಲಿನ ಮೊದಲ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಕುಲಪತಿ ಪ್ರೊ. ಪಿ. ಎಲ್. ಧರ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಸರ್ಕಾರದ ಆದೇಶದನ್ವಯ ಪ್ರವೇಶಾತಿ ಇಲ್ಲದ ಕೋರ್ಸ್‌ಗಳನ್ನು ರದ್ದುಗೊಳಿಸಿ, ಹೊಸ ಉದ್ಯೋಗ ಆಧಾರಿತ ಕೋರ್ಸ್‌ಗಳನ್ನು ಆರಂಭಿಸಲು ಒಪ್ಪಿಗೆ ನೀಡಲಾಯಿತು.
*ಯಾವೆಲ್ಲಾ ಕಾಲೇಜುಗಳಲ್ಲಿ ಬಿಎ ಬಂದ್?
ರಾಜ್ಯ ಸರ್ಕಾರದ ನಿರ್ದೇಶನದಂತೆ ಪ್ರಸಕ್ತ ಸಾಲಿನಿಂದ ಕಾವೂರು ಸರ್ಕಾರಿ ಕಾಲೇಜು (ಮಂಗಳೂರು) ಇಲ್ಲಿನ ಅರ್ಥಶಾಸ್ತ್ರ, ಇತಿಹಾಸ, ಸಮಾಜಶಾಸ್ತ್ರ ಹಾಗೂ ಇತಿಹಾಸ, ಪತ್ರಿಕೋದ್ಯಮ, ಕನ್ನಡ ಕಾಂಬಿನೇಷನ್‌ಗಳು ಬಂದ್ ಆಗಿದೆ. ಪುಂಜಾಲಕಟ್ಟೆ ಸರ್ಕಾರಿ ಕಾಲೇಜಿನ ಅರ್ಥಶಾಸ್ತ್ರ, ಕನ್ನಡ ಮತ್ತು ಸಮಾಜಶಾಸ್ತ್ರ ಕಾಂಬಿನೇಷನ್ ರದ್ದು, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜು (ಅಜ್ಜರಕಾಡು, ಉಡುಪಿ) ಇಲ್ಲಿನ ಇಂಗ್ಲಿಷ್, ಇತಿಹಾಸ ಮತ್ತು ರಾಜ್ಯಶಾಸ್ತ್ರ ಕಾಂಬಿನೇಷನ್ ಕ್ಲೋಸ್ ಆಗಿದೆ. ಈ ಸರ್ಕಾರಿ ಕಾಲೇಜುಗಳಲ್ಲಿ ಕಲಾ ವಿಭಾಗದ ನಿರ್ದಿಷ್ಟ ಕಾಂಬಿನೇಷನ್‌ಗಳನ್ನು ಮುಚ್ಚಲಾಗುತ್ತಿದೆ.
ವಿಶ್ವದಾದ್ಯಂತ ಸಂಭವಿಸುತ್ತಿರುವ ಭೂಕಂಪ, ಭೂಕುಸಿತ, ಪ್ರವಾಹಗಳಂತಹ ನೈಸರ್ಗಿಕ ವಿಕೋಪಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ವಿಪತ್ತು ನಿರ್ವಹಣೆ ಕೋರ್ಸ್ ಅನ್ನು ಓಪನ್ ಎಲೆಕ್ಟಿವ್ ಆಗಿ ಸೇರಿಸಲು ಹಾಗೂ ಜಾಗತಿಕ ಆಹಾರದ ಕೊರತೆ ನೀಗಿಸಲು ಕೃಷಿ ಚಟುವಟಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ವಿಜ್ಞಾನ ವಿಭಾಗದ ಪಠ್ಯಕ್ರಮದಲ್ಲಿ ಆಹಾರ ಬಿಕ್ಕಟ್ಟು ಕುರಿತ ವಿಷಯಗಳನ್ನು ಸೇರಿಸಲು ವಿಭಾಗೀಯ ಮುಖ್ಯಸ್ಥರಿಗೆ ಕುಲಪತಿಗಳು ಸೂಚಿಸಿದ್ದಾರೆ.
---------------
ಹೊಸ ಕೋರ್ಸ್ ಪರಿಚಯ
ಬಿಎ ಕೋರ್ಸ್‌ಗಳು ಬಂದ್ ಆಗುತ್ತಿದ್ದರೂ, ವಿದ್ಯಾರ್ಥಿಗಳ ಬೇಡಿಕೆಗೆ ತಕ್ಕಂತೆ ಉಪ್ಪಿನಂಗಡಿ, ಪುಂಜಾಲಕಟ್ಟೆ ಹಾಗೂ ಪುತ್ತೂರಿನ ಸರ್ಕಾರಿ ಕಾಲೇಜುಗಳಲ್ಲಿ ಹೊಸ ಕೋರ್ಸ್‌ಗಳನ್ನು ಪರಿಚಯಿಸಲಾಗುತ್ತಿದೆ. ಬಿ.ಕಾಂ ಬ್ಯಾಂಕಿಂಗ್ ಫೈನಾನ್ಷಿಯಲ್ ಸರ್ವಿಸಸ್ ಅಂಡ್ ಇನ್ಶೂರೆನ್ಸ್, ಹ್ಯೂಮನ್ ರಿಸೋರ್ಸ್ ಆಪರೇಷನ್ಸ್, ಲಾಜಿಸ್ಟಿಕ್ಸ್ ಹಾಗೂ ಬಿಎಸ್ಸಿ ಕೋರ್ಸ್‌ಗಳಿಗೆ ಅನುಮೋದನೆ ನೀಡಲಾಗಿದೆ. ಮುಡಿಪು ಮತ್ತು ಹರೇಕಳ ಕಾಲೇಜುಗಳಲ್ಲಿ ಬಿ.ಕಾಂ ಮತ್ತು ಬಿಬಿಎ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ. ಎಲ್. ಧರ್ಮ ಮಾಹಿತಿ ನೀಡಿದರು.
--------------
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net