_1775230857443.webp?w=480&auto=format%2Ccompress&fit=max)
_1775230857443.webp?w=480&auto=format%2Ccompress&fit=max)
ಪ್ರಮುಖ ಮುಖ್ಯಾಂಶಗಳು
ಸೆಸ್ ಮೊತ್ತದ ಗೊಂದಲ
ಬಿಕ್ಷಾಟನೆ ಸೆಸ್ ಎಂದು ಸಂಗ್ರಹಿಸಿರುವ ಮೊತ್ತವನ್ನು ಎಸ್ಕ್ರೊ ಖಾತೆಯಲ್ಲಿ ಇರಿಸಲಾಗಿದ್ದು, ಅದು ನೇರವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹೋಗುತ್ತದೆ ಎಂದು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರ್ಜಿದಾರರ ಪರ ವಕೀಲರು, ಬಿಕ್ಷುಕರ ಸೆಸ್ ಎಂದು ಒಟ್ಟು 7 ಕೋಟಿ ರೂ. ಸಂಗ್ರಹವಾಗಿದ್ದರೂ ಕೇವಲ 3 ಕೋಟಿ ರೂ. ಮಾತ್ರ ಖಾತೆಗೆ ವರ್ಗಾವಣೆಯಾಗಿದೆ ಎಂದು ತಿಳಿಸಿದರು. ಇದನ್ನು ಆಲಿಸಿದ ನ್ಯಾಯಪೀಠ, ಸಂಗ್ರಹಿಸಲಾಗಿರುವ "ಬಿಕ್ಷಾಟನೆ ಸೆಸ್' ಎಷ್ಟು ಮತ್ತು ಅದನ್ನು ಹೇಗೆ ಬಳಸಲಾಗಿದೆ ಎಂಬುದರ ಬಗ್ಗೆ ಸಮಗ್ರ ವರದಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ.