ತಾಲೂಕು ಪಂಚಾಯತ್ ಕಚೇರಿಯಲ್ಲೇ ಸಾವಿಗೆ ಶರಣಾದ ನೋಡಲ್ ಅಧಿಕಾರಿ!

Nodal Officer
Published on

ಧಾರವಾಡ: ಇತ್ತೀಚೆಗೆ ಕೆಲವು ಸರ್ಕಾರಿ ಸಿಬ್ಬಂದಿ/ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣ ಹೆಚ್ಚಾಗಿದೆ. ಇದೀಗ ಇನ್ನೊಬ್ಬ ಅಧಿಕಾರಿಯ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಅದರಲ್ಲೂ ಈ ಪ್ರಕರಣ ಸರ್ಕಾರಿ ಕಚೇರಿಯೊಳಗೇ ನಡೆದಿದೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕು ಪಂಚಾಯತ್​ ಕಚೇರಿಯಲ್ಲಿ ಈ ಘಟನೆ ನಡೆದಿದೆ. ತಾಲೂಕು ಪಂಚಾಯತ್ ಕಚೇರಿಯ ಸಕ್ರೆಪ್ಪ ಚಕ್ಕೋಡಿ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಇಲ್ಲಿ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಕಚೇರಿಯ ಒಂದು ಬದಿಯ ಕಟ್ಟಡದಲ್ಲಿ ಇವರು ಇಂದು ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ. ಇವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ನವಲಗುಂದ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net