Video Viral | ಬ್ಯಾಡ್ಮಿಂಟನ್ ಆಡುತ್ತಲೇ ಹೃದಯಾಘಾತ; ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು!

noida
noida dies of heart attack
Published on

ನೋಯ್ಡಾ: ಬ್ಯಾಡ್ಮಿಂಟನ್(Badminton) ಆಟ ಆಡುವ ವೇಳೆ ಹೃದಯಾಘಾತದಿಂದ(Heart Attack) ವ್ಯಕ್ತಿ ಸಾವನ್ನಪ್ಪಿರುವ ಘಟನೆಯೊಂದು ಉತ್ತರಪ್ರದೇಶದ ನೋಯ್ಡಾದಲ್ಲಿ(Noida) ವರದಿಯಾಗಿದೆ.

ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್(Viral) ಆಗಿದೆ. ಸೆಕ್ಟರ್ 21-ಎ ಸ್ಥಳದಲ್ಲಿ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ 52 ವರ್ಷದ ವ್ಯಕ್ತಿಗೆ ಹೃದಯಾಘಾತ ಸಂಭವಿಸಿದೆ. ಸ್ಥಳೀಯರು ಕೂಡಲೇ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ನೀಡಲು ಮುಂದಾದ ವೈದ್ಯರು ಅವರು ಸಾವನ್ನಪ್ಪಿರುವ ಬಗ್ಗೆ ಧೃಢಪಡಿಸಿದ್ದಾರೆ.

ಮೃತ ವ್ಯಕ್ತಿಯನ್ನು 52 ವರ್ಷ ವಯಸ್ಸಿನ ಮಹೇಂದ್ರ ಶರ್ಮ ಎಂದು ಗುರುತಿಸಲಾಗಿದೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ಸ್ಥಳೀಯ ಪೊಲೀಸರು ವರದಿಯಲ್ಲಿ ತಿಳಿಸಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net