

ಹುಣಸೂರು: ಫೆ.9ರಂದು ನಡೆಯಲಿರುವ ನಗರಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು 31 ವಾರ್ಡ್‌ಗಳಿಂದ ಒಟ್ಟು 110ಕ್ಕೂ ಹೆಚ್ಚು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸ್ವೀಕಾರಕ್ಕೆ ಕಡೇ ದಿನವಾದ ಮಂಗಳವಾರ ಪಿಡಬ್ಲುೃಡಿ ಕಚೇರಿ ಕೇಂದ್ರದಲ್ಲಿ 34 ನಾಮಪತ್ರಗಳು ಸಲ್ಲಿಕೆಯಾಗಿವೆ. ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಕಚೇರಿ ಆವರಣಕ್ಕೆ ಆಗಮಿಸಿದ ಅಭ್ಯರ್ಥಿಗಳಿಗೆ ಟೋಕನ್ ನೀಡಿ ನಾಮಪತ್ರ ಸ್ವೀಕರಿಸಿದರು.
ಎಲ್ಲ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಚುನಾವಣಾಧಿಕಾರಿಗಳ ಕಚೇರಿಗಳಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಕೆಲ ಅಭ್ಯರ್ಥಿಗಳ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದರು.