ಬೆಂಗಳೂರು: ಚೆಕ್‌ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೀಡಾ ಸಚಿವ ಬಿ.ನಾಗೇಂದ್ರ ಅವರಿಗೆ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಚೆಕ್‌ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಎಸ್‌ಎಲ್ ಸ್ಟೀಲ್ಸ್ ಕಂಪನಿ ಮ್ಯಾನೇಜರ್ ರಾಘವೇಂದ್ರ ಘೋಡ್ಕೆ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ. ಈ ಮೊದಲು ಮೂರು ಬಾರಿ ಸಮನ್ಸ್ ಜಾರಿಗೊಳಿಸಿದ್ದರೂ ಕೋರ್ಟ್‌ಗೆ ಗೈರಾದ ಕಾರಣ ಆರೋಪಿ ನಾಗೇಂದ್ರ ಅವರನ್ನು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಲು ಆದೇಶಿಸಲಾಗಿದೆ. ವಿಚಾರಣೆಯನ್ನು ಅ. ೩೧ಕ್ಕೆ ಮುಂದೂಡಲಾಗಿದೆ. ಈ ಪ್ರಕರಣದಲ್ಲಿ ನಾಗೇಂದ್ರ ಮೂರನೇ ಆರೋಪಿಯಾಗಿದ್ದಾರೆ.