ಈಶಾನ್ಯ ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡಿದ್ದ ಆರು ಮಂದಿ ಸಾವು, ಮೃತಪಟ್ಟವರ ಸಂಖ್ಯೆ 53ಕ್ಕೆ ಏರಿಕೆ

delhi voilence 5 mar 20
Published on

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ ಈಗ 53ಕ್ಕೆ ಏರಿಕೆಯಾಗಿದೆ.

ಗುರುವಾರ ಗುರುತೇಜ್​ ಬಹದ್ದೂರ್​ ಆಸ್ಪತ್ರೆಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಆರ್‌ಎಂಎಲ್ ಆಸ್ಪತ್ರೆಯಲ್ಲಿ 5 ಮಂದಿ, ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಮೂವರು ಹಾಗೂ ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ಸಂಭವಿಸಿತ್ತು. ಗಲಭೆಯಲ್ಲಿ 300 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಮನೆ ಹಾಗೂ ವಾಣಿಜ್ಯ ಕಟ್ಟಡಗಳಿಗೆ ಬೆಂಕಿ ಹಚ್ಚಲಾಗಿತ್ತು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net