

ಶ್ರೀನಗರ: ಉತ್ತರ ಕಾಶ್ಮೀರದ ಸೊಪೋರ್ ಪಟ್ಟಣದ ವಾರ್ಪೋರಾ ಗ್ರಾಮದಲ್ಲಿ ಬುಧವಾರ ಸಂಜೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಬಲಿಯಾಗಿದ್ದಾರೆ.
ವಾರ್ಪೋರಾ ಮಾರುಕಟ್ಟೆ ಬಳಿ ಅಡಗಿದ್ದ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ ವಜತ್ ಅಹಮದ್ ಹಾಗೂ ಅಂಗಡಿ ಮಾಲೀಕ ಒಮರ್ ಸುಭಾನ್ ಸ್ಥಳದಲ್ಲೇ ಮೃತಪಟ್ಟರು. ಶೋಕತ್ ಅಹಮದ್ ಎಂಬುವವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಂಡಿನ ದಾಳಿಯ ನಂತರ ಭದ್ರತಾ ಪಡೆಯೋಧರು ಮಾರುಕಟ್ಟೆ ಸುತ್ತುವರಿದು ಉಗ್ರರಿಗೆ ಶೋಧ ನಡೆಸುತ್ತಿದ್ದಾರೆ.
ಚಾದೂರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಶಂಕೆ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ. (ಏಜೆನ್ಸೀಸ್)