ರಾಜ್ಯದ ಹಲವೆಡೆ ಗುಡುಗು, ಬಿರುಗಾಳಿ ಸಹಿತ ಹಿಂಗಾರು ಮಳೆ ಸಿಂಚನ- Northeast monsoon rain

ಚಾಮರಾಜನಗರ, ಮೈಸೂರಿನಲ್ಲಿ ಮುಂದಿನ 4 ದಿನ, ಕೊಡಗು, ಚಿಕ್ಕಮಗಳೂರಿನಲ್ಲಿ ಅ.23, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಅ.24ರಂದು ಜೋರು ಮಳೆಯಾಗುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.
ಹವಾಮಾನ ಇಲಾಖೆ ಮಾಹಿತಿ
ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆ
Published on: 

ಬೆಂಗಳೂರು: (Northeast monsoon rain) ಮುಂಗಾರು ಕೊರತೆಯಿಂದ ಬರ ಎದುರಿಸುತ್ತಿದ್ದ ಕರುನಾಡಿಗೆ ಹಿಂಗಾರು ಮಳೆ ಸಿಂಚನವಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಬೆಂಗಳೂರು ನಗರ ಸೇರಿ ರಾಜ್ಯದ ಹಲವೆಡೆ ಗುರುವಾರವೂ ಗುಡುಗು, ಬಿರುಗಾಳಿ ಸಹಿತ ವರುಣಾರ್ಭಟವಾಗಿದೆ.

ಚಾಮರಾಜನಗರ, ಮೈಸೂರಿನಲ್ಲಿ ಮುಂದಿನ 4 ದಿನ, ಕೊಡಗು, ಚಿಕ್ಕಮಗಳೂರಿನಲ್ಲಿ ಅ.23, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಅ.24ರಂದು ಜೋರು ಮಳೆಯಾಗುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಬೆಂ.ದಕ್ಷಿಣದಲ್ಲಿ ಅ.26ರಂದು ಗುಡುಗು ಸಹಿತ ಜೋರು ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ಉಳಿದ ಜಿಲ್ಲೆಗಳಲ್ಲಿ ಎಂದಿನಂತೆ ಒಣಹವೆ ಮುಂದುವರಿದಿದೆ.

Also Read
ಬಡ ಮಹಿಳೆಯರ ಜೀವದ ಜೊತೆ ಚೆಲ್ಲಾಟ: ಅಕ್ರಮ IVF, ಮಾನವ ಅಂಡಾಣು ಮಾಫಿಯಾ ಬಯಲು; 5 ವೈದ್ಯರು ಸೇರಿ 15 ಜನರ ಮೇಲೆ FIR ದಾಖಲು! Illegal Egg Donation
ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು ನಗರದಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದೆ. ಈ ವೇಳೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕೆಲವು ಬಡಾವಣೆಗಳಲ್ಲಿ ಬಿರುಗಾಳಿ ಬೀಸಲಿದೆ. ಗರಿಷ್ಠ, ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ. ದಾಖಲಾಗಬಹುದು.

ಮಳೆ ಮತ್ತು ಮೋಡ ಕವಿದ ವಾತಾವರಣದಿಂದ ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಉಷ್ಣಾಂಶ ದಾಖಲಾದರೆ, ಉತ್ತರ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಉಷ್ಣಾಂಶ ಕಂಡುಬಂದಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net