ಎರಡನೇ ಮಹಾಯುದ್ಧ ಕಾಲದ ಬಾಂಬ್​ ಪತ್ತೆ..!

bomb
Published on

ಲಂಡನ್: ಉತ್ತರ ಐರ್ಲೆಂಡ್‌ನ ಕೌಂಟಿ ಡೌನ್‌ನ ನ್ಯೂಟೌನಾರ್ಡ್ಸ್‌ನಲ್ಲಿ ಎರಡನೇ ಮಹಾಯುದ್ಧದ ಬಾಂಬ್ ಪತ್ತೆಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ 400 ಮೀಟರ್ ವ್ಯಾಪ್ತಿಯಲ್ಲಿರುವ ಮನೆಗಳಲ್ಲಿನ ಜನರನ್ನು ಸ್ಥಳಾಂತರಿಸಲಾಗಿದೆ.

ಕಟ್ಟಡ ಕಾಮಗಾರಿಗಾಗಿ ನೆಲ ಸಮತಟ್ಟು ಮಾಡುವ ವೇಳೆ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಅದನ್ನು ಬಾಂಬ್ ಎಂದು ನಿರ್ಧರಿಸಿದ್ದಾರೆ. ಬಾಂಬ್ ನಿಷ್ಕ್ರಿಯ ಪಡೆಗಳು ಅಲ್ಲಿಗೆ ಬಂದು ಪರಿಶೀಲನೆ ನಡೆಸಿದಾಗ ಅದು 2ನೇ ಮಹಾಯುದ್ಧದ ಕಾಲದ ಸ್ಫೋಟಕ ಸಾಧನವಾಗಿರುವುದು ಕಂಡುಬಂದಿದೆ.

ಕೂಡಲೇ ಅದನ್ನು ನಿಷ್ಕ್ರಿಯಗೊಳಿಸುವ ಪ್ರಯತ್ನಗಳು ನಡೆದಿವೆ. ಇದಕ್ಕೆ ಇನ್ನೂ ಐದು ದಿನಗಳು ಬೇಕಾಗಬಹುದು ಎಂದು ಅಧಿಕಾರಿಗಳು ಭಾನುವಾರ ಬಹಿರಂಗಪಡಿಸಿದ್ದಾರೆ.

ಅಲ್ಲಿಯವರೆಗೆ ಜನರು ಸ್ಥಳದಿಂದ ದೂರವಿರಬೇಕು. ಇದರಿಂದ ದಿನನಿತ್ಯದ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುವ ಸಾಧ್ಯತೆ ಇದೆ. ಆದರೆ ಸುರಕ್ಷತೆ ಮೊದಲ ಆದ್ಯತೆಯಾಗಿದೆ. ಇದಕ್ಕೆ ಜನರು ಅವರಿಗೆ ಸಹಕಾರ ನೀಡುತ್ತಿದ್ದಾರೆ. ಬಾಂಬ್ ಪತ್ತೆಯಾದ ಸುತ್ತಮುತ್ತಲಿನ ಎಲ್ಲಾ ರಸ್ತೆಗಳನ್ನು ಮುಚ್ಚಲಾಗಿದೆ. ಯಾವುದೇ ವಾಹನಗಳಿಗೆ ಪ್ರವೇಶಿಸಲು ಅವಕಾಶವಿಲ್ಲ. ಸ್ಥಳೀಯ ಜನರ ಅನುಕೂಲಕ್ಕಾಗಿ ತುರ್ತು ಕೇಂದ್ರವನ್ನು ಸ್ಥಾಪಿಸಲಾಗಿದೆ. ಸ್ಥಳೀಯ ಜನರನ್ನು ವಿಶೇಷವಾಗಿ ಸ್ಥಾಪಿಸಲಾದ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net