

ಬೆಂಗಳೂರು ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಜೂ.11ರಂದು ಅಂತಾರಾಷ್ಟ್ರೀಯ ಆಟದ ದಿನವನ್ನಾಗಿ ಆಚರಿಸುವಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯವು ನಿರ್ದೇಶನ ನೀಡಿದೆ.
ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಪತ್ರ ಬರೆದಿದ್ದಾರೆ.
ಜೂ.11 ಅನ್ನು ಅಂತಾರಾಷ್ಟ್ರೀಯ ಆಟದ ದಿನವೆಂದು ವಿಶ್ವಸಂಸ್ಥೆಯು ಅಂಗೀಕರಿಸಿದ್ದು, ಮೊದಲನೆಯ ಅಂತಾರಾಷ್ಟ್ರೀಯ ಆಟದ ದಿನವನ್ನು ಎಲ್ಲ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಆಚರಿಸುವಂತೆ ಕೋರಲಾಗಿದೆ. ಅಂದು ಮಕ್ಕಳಿಗೆ ಮನರಂಜನೆ ನೀಡುವಂತಹ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರ ಮೂಲಕ ದಿನ ಆಚರಿಸುವಂತೆ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.