ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಕಡ್ಡಾಯ ಬಳಕೆಗೆ ಸೂಚನೆ

Nandini Ghee
Published on

ಬೆಂಗಳೂರು: ತಿರುಪತಿಯಲ್ಲಿ ಲಡ್ಡು ಪ್ರಸಾದಕ್ಕೆ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಬಳಕೆ ವಿಚಾರ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಪ್ರಸಾದ ತಯಾರಿಕೆಗೆ ಶುದ್ಧ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಇಲಾಖೆ ಸೂಚಿಸಿದೆ.

ಈ ಸಂಬಂಧ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ದೇವಾಲಯಗಳಲ್ಲಿ ಸೇವೆಗಳನ್ನು ಮಾಡಲು, ದೀಪಗಳನ್ನು ಬೆಳಗಿಸಲು, ಎಲ್ಲ ವಿಧದ ಪ್ರಸಾದ ತಯಾರಿಸಲು ಹಾಗೂ ದಾಸೋಹ ಭವನಗಳಲ್ಲೂ ಕಡ್ಡಾಯವಾಗಿ ಶುದ್ಧ ನಂದಿನಿ ತುಪ್ಪವನ್ನು ಮಾತ್ರವೇ ಬಳಸಬೇಕು. ಜೊತೆಗೆ ಪ್ರಸಾದ ತಯಾರಿಕೆಯಲ್ಲಿ ಶುಚಿತ್ವ ಹಾಗೂ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net