ಪೋಕ್ಸೋ ಪ್ರಕರಣ, ಬಿಎಸ್‌ವೈಗೆ ಸಿಐಡಿಯಿಂದ ನೋಟಿಸ್

Yadiyurappa
Published on

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ.
ಬುಧವಾರ ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸೋಮವಾರ ಸಂಜೆ ನೋಟಿಸ್ ನೀಡಲಾಗಿದ್ದು, ಪೂರ್ವ ನಿಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿರುವುದರಿಂದ ನಾನು ದೆಹಲಿಗೆ ತೆರಳುತ್ತಿದ್ದೇನೆ. ಹೀಗಾಗಿ ಜೂ.೧೫ ರಂದು ವಿಚಾರಣೆಗೆ ಹಾಜರಾಗುವುದಾಗಿ ವಕೀಲರ ಮೂಲಕ ಬಿ.ಎಸ್.ಯಡಿಯೂರಪ್ಪ ನೋಟಿಸ್‌ಗೆ ಉತ್ತರಿಸಿದ್ದಾರೆ.
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಯಡಿಯೂರಪ್ಪ ವಿರುದ್ಧ ಕೇಳಿ ಬಂದಿತ್ತು. ಫೆಬ್ರವರಿ ತಿಂಗಳಿನಲ್ಲಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಬಾಲಕಿಯ ತಾಯಿ ಮಾ. ೧೪ರಂದು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಯಡಿಯೂರಪ್ಪ ಅವರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಏ.೧೨ ರಂದು ಯಡಿಯೂರಪ್ಪ ಪೊಲೀಸರ ವಿಚಾರಣೆಗೆ ಹಾಜರಾಗಿದ್ದರು. ನಂತರ ಪ್ರಕರಣದ ತನಿಖೆ ಸಿಐಡಿಗೆ ವರ್ಗಾಯಿಸಲಾಗಿತ್ತು. ತನಿಖೆಯ ಭಾಗವಾಗಿ ಸಿಐಡಿ ಇದೀಗ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net