ಯತ್ನಾಳ್‌ಗೆ ನೋಟಿಸ್ ಜಾರಿ

Yathnal
Published on

ಬೆಂಗಳೂರು: ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ಹಿನ್ನೆಲೆ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಇದೀಗ ದೂರು ಸಂಬಂಧ ಯತ್ನಾಳ್‌ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ ನೋಟಿಸ್ ನೀಡಲಾಗಿದೆ. ಲೋಕಸಭಾ ಚುನಾವಣೆ ವೇಳೆ ಯತ್ನಾಳ್ ಮಾಡಿದ್ದ ಭ್ರಷ್ಟಾಚಾರದ ಸುಳ್ಳು ಆರೋಪದಿಂದ ವರ್ಚಸ್ಸಿಗೆ ಧಕ್ಕೆಯಾಗಿದೆ. ಹೀಗಾಗಿ ಮಾನನಷ್ಟ ಪ್ರಕರಣ ದಾಖಲಿಸುವಂತೆ ಖಾಸಗಿ ದೂರು ನೀಡಿದ್ದರು. ಹೀಗಾಗಿ ಇದೀಗ ನೋಟಿಸ್ ನೀಡಲಾಗಿದೆ.
ಜು. ೧೮ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್:
ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ಗೆ ಸಂಬಂಧಿಸಿದಂತೆ ೨ನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದ ಸೂರಜ್ ಅರ್ಜಿಯನ್ನು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜುಲೈ ೧೮ಕ್ಕೆ ಆದೇಶ ಕಾಯ್ದಿರಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net