

ಬೆಂಗಳೂರು: ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಮರದ ಟೊಂಗೆ ಬಿದ್ದು ಅಕ್ಷಯ್ ಎಂಬಾತ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅರಣ್ಯ ಘಟಕದ ಅಧಿಕಾರಿಗಳಿಗೆ ಹನುಮಂತನಗರ ಪೊಲೀಸ್ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಮೃತ ಅಕ್ಷಯ್ ಅವರ ಸಹೋದರ ಬೆನಕರಾಜ್ ಅವರ ದೂರು ಆಧರಿಸಿ, ಬಿಬಿಎಂಪಿ ಅರಣ್ಯ ವಿಭಾಗದ ಆರ್‌ಎಫ್‌ಓ, ಎಸಿಎಫ್, ಡಿಎಫ್‌ಓ ಮತ್ತು ಅರಣ್ಯ ಇಲಾಖೆಯ ಇತರೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈಗಾಗಲೇ ಪ್ರಕರಣ ಸಂಬಂಧ ಪೊಲೀಸರು, ಸ್ಥಳ ಮಹಜರು ನಡೆಸಿದ್ದಾರೆ.ಇದೀಗ ದಕ್ಷಿಣ ವಿಭಾಗದ ಬಿಬಿಎಂಪಿ ಅರಣ್ಯ ವಿಭಾಗದ ಆರ್‌ಎಫ್‌ಓ, ಎಸಿಎಫ್, ಡಿಎಫ್‌ಓ ಮತ್ತು ಅರಣ್ಯ ಇಲಾಖೆಯ ಇತರೆ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಒಂದೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.