ಮಾಜಿ ಸಚಿವ ನಾಗೇಂದ್ರಗೆ ನೋಟಿಸ್

highcourt
Published on

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದ ಕೋಟ್ಯಂತರ ರೂ.ಗಳ ಅವ್ಯವಹಾರ ಆರೋಪ ಎದುರಿಸುತ್ತಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ನೀಡಿರುವ ಜಾಮೀನು ರದ್ದು ಕೋರಿ ಜಾರಿ ನಿರ್ದೇಶನಾಲಯ (ಇಡಿ) ಹೈಕೋರ್ಟ್ ಮೆಟ್ಟಿಲೇರಿದೆ.

ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಇಡಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಬಿ.ನಾಗೇಂದ್ರಗೆ ನೋಟಿಸ್ ಜಾರಿಗೊಳಿಸಿದೆ.

ವಿಚಾರಣೆ ವೇಳೆ ಇಡಿ ಪರ ಹಾಜರಿದ್ದ ಸಹಾಯಕ ಎಸ್.ವಿ.ರಾಜು ಮತ್ತು ಪಿ.ಪ್ರಸನ್ನಕುಮಾರ್, ಜಾಮೀನು ಕ್ರಮ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ ಎಂದು ಪೀಠಕ್ಕೆ ವಿವರಿಸಿದರು.

ವಾದ ಆಲಿಸಿದ ನ್ಯಾಯಪೀಠ, ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಿದಾಗ ಪ್ರತಿವಾದಿಗಳ (ನಾಗೇಂದ್ರ) ವಾದ ಆಲಿಸದೇ ಆದೇಶ ನೀಡುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ನೋಟಿಸ್ ಜಾರಿ ಮಾಡುತ್ತಿರುವುದಾಗಿ ತಿಳಿಸಿ ವಿಚಾರಣೆಯನ್ನು ನ.15ಕ್ಕೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net