

ಬೆಂಗಳೂರು: ಡಿಸೆಂಬರ್‌ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಹೇಳಿಕೆ ನೀಡಿದ್ದ ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾಗೆ ಕಾರಣ ಕೇಳಿ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ನೋಟಿಸ್ ನೀಡಿದೆ.
ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿರುವುದು ಪಕ್ಷದಲ್ಲಿ ಮುಜುಗರ ಉಂಟು ಮಾಡಿದ್ದು, ಪಕ್ಷದ ಶಿಸ್ತು ಉಲ್ಲಂಘನೆ ಆಗಿರುತ್ತದೆ. ಈ ಅಶಿಸ್ತಿನ ಹೇಳಿಕೆಗಳನ್ನು ಕೆಪಿಸಿಸಿ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿದೆ. ನೋಟಿಸ್ ತಲುಪಿದ 7 ದಿನಗಳಲ್ಲಿ ಸಮಜಾಯಿಷಿ ನೀಡಬೇಕೆಂದು ಸಮಿತಿ ಅಧ್ಯಕ್ಷ ಕೆ. ರೆಹಮಾನ್ ಖಾನ್ ಸೂಚಿಸಿದ್ದಾರೆ.
ಕೆಲ ದಿನಗಳ ಹಿಂದೆ ದಾವಣಗೆರೆಯಲ್ಲಿ ಶಿವಗಂಗಾ, ಡಿಸೆಂಬರ್‌ನಲ್ಲಿ ಡಿಕೆಶಿ ಸಿಎಂ ಆಗುತ್ತಾರೆ. ಇದನ್ನು ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಹೇಳಿದ್ದರು. ಈ ಕುರಿತು ಜುಲೈ 23ರಂದು ಪ್ರತಿಕ್ರಿಯಿಸಿದ್ದು, ಡಿಸೆಂಬರ್‌ನಲ್ಲಿ ಸಿಎಂ ಬದಲಾಗುತ್ತಾರೆ ಎಂದು ಹೇಳಿದ್ದೆ. ಅಲ್ಲಿಯವರೆಗೆ ಈ ವಿಷಯವನ್ನು ಮಾತನಾಡಲ್ಲ. ಕಾದು ನೋಡಿ ಎಂದಿದ್ದರು.
ಹಲವು ಬಾರಿ ಮುಖ್ಯಮಂತ್ರಿ ಬದಲಾಗ್ತಾರೆ. ಅಧಿಕಾರ ಹಸ್ತಾಂತರ ಆಗಲಿದೆ ಎಂದು ಹೇಳುತ್ತಲೇ ಬಂದಿದ್ದರು. ಹೈಕಮಾಂಡ್ ನಾಯಕರು ಈ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಸೂಚಿಸಿದ್ದರೂ ಶಿವಗಂಗಾ ಅಭಿಪ್ರಾಯ ವ್ಯಕ್ತಪಡಿಸುತ್ತಲೇ ಬಂದಿದ್ದರು.