

ಬೆಂಗಳೂರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ 100 ಶುಶ್ರೂಷಾಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಸೂಚನೆ ಪ್ರಕಟಿಸಿದೆ
ಉಳಿಕೆ ಮೂಲ ವೃಂದದ 92 ಮತ್ತು ಕಲ್ಯಾಣ ಕರ್ನಾಟಕದ 8 ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದೆ.
ನರ್ಸಿಂಗ್ ಮುಗಿಸಿರುವ ಸಾಮಾನ್ಯ ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 35, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ, ಪಂಗಡ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನ.2 ಮತ್ತು ಇ-ಪೋಸ್ಟ್ ಆಫೀಸ್‌ನಲ್ಲಿ ಶುಲ್ಕ ಪಾವತಿಸಲು ನ.4 ಕೊನೆಯ ದಿನವಾಗಿದೆ. ಸಾಮಾನ್ಯ ಮತ್ತು ಹಿಂದುಳಿದ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕ 750 ರೂ. ಮತ್ತು ಪರಿಶಿಷ್ಟ ಜಾತಿ, ಪಂಗಡ ಅಭ್ಯರ್ಥಿಗಳಿಗೆ 500 ರೂ. ನಿಗದಿ ಮಾಡಲಾಗಿದೆ. ಪರೀಕ್ಷೆಗಳನ್ನು ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಸಲಾಗುತ್ತದೆ.
ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಜ್ಞಾನ, ತಾರ್ಕಿಕ ಮತ್ತು ಮಾನಸಿಕ ಸಾಮರ್ಥ್ಯ ಹಾಗೂ ಕಂಪ್ಯೂಟರ್ ಜ್ಞಾನಕ್ಕೆ 20 ಅಂಕಗಳು ಹಾಗೂ ಬಿಎಸ್ಸಿ ನರ್ಸಿಂಗ್ 80 ಅಂಕಗಳು ಸೇರಿ 100 ಅಂಕಗಳಿಗೆ 2 ಗಂಟೆ ಅವಧಿಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯು ಋಣಾತ್ಮಕ ಮೌಲ್ಯಮಾಪನ ಮಾಡಲಾಗುತ್ತದೆ. ತಪ್ಪು ಉತ್ತರಗಳಿಗೆ ಪ್ರತಿ ನಾಲ್ಕನೇ ಒಂದಂಶ ಅಂಕಗಳನ್ನು ಕಳೆಯಲಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಕೆಇಎ ವೆಬ್‌ಸೈಟ್ “http://kea.kar.nic.in ಭೇಟಿ ನೀಡಬಹುದು.