ಎನ್‌ಪಿಎಸ್ ರದ್ದಿಗೆ ಸಿ.ಎಸ್.ಷಡಾಕ್ಷರಿ ಆಗ್ರಹ

Published on


ಬೆಂಗಳೂರು:
ರಾಜ್ಯ ಸರ್ಕಾರಿ ನೌಕರರಿಗೆ ಹೊಸ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್)ರದ್ದುಪಡಿಸಿ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು ಎನ್ನುವ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ಹಾಕಲಾಗಿದೆ. ಅನಿವಾರ್ಯವಾದರೆ ಮುಂದೆ ಹೋರಾಟ ಮಾಡಲಾಗುವುದು ಎಂದು ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ, ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ ವಿಷಯಗಳ ಬಗ್ಗೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದೆಂದರು.

ಕಾರ್ಯಾಗಾರ
ರಾಷ್ಟ್ರೀಯ ಹಳೇ ಪಿಂಚಣಿ ಯೋಜನೆ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಕಾರ್ಯಾಗಾರ ಏರ್ಪಡಿಸಿದ್ದು, ರಾಷ್ಟ್ರೀಯ ಹಳೇ ಪಿಂಚಣಿ ಯೋಜನೆ ಮರುಸ್ಥಾಪನ ಸಂಯುಕ್ತ ಮೋರ್ಚಾ ಅಧ್ಯಕ್ಷ ಬಿ.ಪಿ. ರಾವತ್, ಈ ಯೋಜನೆ ಪುನರ್ ಸ್ಥಾಪನೆಯ ಸಾದ್ಯತೆಗಳ ಕುರಿತು ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗಾ, ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿನ ಸಮಸ್ಯೆಗಳ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ನಿವೃತ್ತ ಉಪ ಕಾರ್ಯದರ್ಶಿ ದೇವರಾಜ್ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು.

ಆ.17 ರಿಂದ ಕ್ರೀಡಾಕೂಟ
ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಕಂಠೀರವ ಕ್ರೀಡಾಂಗಣದಲ್ಲಿ ಆ.17ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದು, ಆ.19ರಂದು ಸಮಾರೋಪಗೊಳ್ಳಲಿವೆ ಎಂದು ಷಡಾಕ್ಷರಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net