

ಬೆಂಗಳೂರು ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮಾತ್ರವಿರುವ ಎನ್‌ಆರ್‌ಐ (ಅನಿವಾಸಿ ಭಾರತೀಯ) ಕೋಟಾ ಸೀಟನ್ನು ಗುಜರಾತ್ ಮಾದರಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪರಿಚಯಿಸಲು ಚಿಂತನೆ ನಡೆಸಿದೆ.
ಈ ಸಂಬಂಧ ರಾಜ್ಯದ ವೈದ್ಯಕೀಯ ನಿರ್ದೇಶನಾಲಯವು ರಾಷ್ಟ್ರೀಯ ವೈದ್ಯಕೀಯ ಪರಿಷತ್ತಿಗೆ (ಎನ್‌ಎಂಸಿ) ಸತತ ಎರಡನೇ ವರ್ಷ ಪ್ರಸ್ತಾವನೆ ಸಲ್ಲಿಸಿದೆ. ಕಳೆದ ವರ್ಷ ಕೂಡ ಎನ್‌ಎಂಸಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಎನ್‌ಎಂಸಿ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಈ ವರ್ಷ ಮತ್ತೊಮ್ಮೆ ಪ್ರಯತ್ನಿಸಿದ್ದು, ಲೋಕಸಭಾ ನೀತಿ ಸಂಹಿತೆ ಮುಗಿದ ಬಳಿಕ ಎನ್‌ಎಂಸಿಯಿಂದ ಪ್ರತಿಕ್ರಿಯೆ ಬರುವ ನಿರೀಕ್ಷೆ ಹೊಂದಲಾಗಿದೆ.