ಪ್ರಮೋದ್‌ಗೆ ಎನ್‌ಎನ್‌ಎಸ್ ಪ್ರಶಸ್ತಿ

1
Published on

ಧರ್ಮಾಪುರ: ರತ್ನಪುರಿಯ ವಿಶ್ವಶಾಂತಿ ಪ್ರಥಮ ದರ್ಜೆ ಕಾಲೇಜಿಗೆ ಸತತ 2ನೇ ವರ್ಷವೂ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯಮಟ್ಟದ ಅತ್ಯುತ್ತಮ ಸ್ವಯಂಸೇವಕ ಪ್ರಶಸ್ತಿ ಲಭಿಸಿದೆ. ಕಾಲೇಜಿನ ತೃತೀಯ ಬಿ.ಎ. ವಿದ್ಯಾರ್ಥಿ ಪ್ರಮೋದ್‌ಗೆ ರಾಜ್ಯ ಮಟ್ಟದ ಅತ್ಯುತ್ತಮ ಸ್ವಯಂಸೇವಕ ಪ್ರಶಸ್ತಿ ಅಲಂಕರಿಸಿದೆ.
ರಾಜಭವನದ ಬ್ಯಾಂಕ್ವೆಟ್ ಹಾಲ್ನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಪ್ರಶಸ್ತಿ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರಶಸ್ತಿ ಪ್ರದಾನ ಮಾಡಿದರು. ಕ್ರೀಡಾ ಹಾಗೂ ಯುವ ಸಬಲೀಕರಣ ಸಚಿವ ನಾಗೇಂದ್ರ, ಮೈಸೂರು ವಿವಿ ಕುಲಪತಿ ಲೋಕನಾಥ್ ಹಾಜರಿದ್ದರು.
ಪ್ರಾಚಾರ್ಯ ಶಿವಕುಮಾರ, ಸಂಸ್ಥೆಯ ಕಾರ್ಯದರ್ಶಿ ಮಹಾಲಿಂಗಪ್ಪ, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಸುಧಾಕರ, ಉಪನ್ಯಾಸಕರಾದ ರವಿ, ಜಯಸ್ವಾಮಿ, ಸಿ.ಎಸ್. ನಾಗೇಶ್, ಮಲ್ಲಿಕಾರ್ಜುನಸ್ವಾಮಿ ಹಾಗೂ ರವಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net