

ರಾಣೆಬೆನ್ನೂರ: ವಿದ್ಯಾಥಿರ್ಗಳು ಎನ್ಎಸ್ಎಸ್ ಕಾರ್ಯಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಉಪನ್ಯಾಸಕ ರವಿ ಕುಂಬಾರ ಹೇಳಿದರು.
ನಗರದ ಕೆಎಲ್ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಸೋಮವಾರ ಏರ್ಪಡಿಸಿದ್ದ ಎನ್ಎಸ್ಎಸ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಚಾರ್ಯ ನಾರಾಯಣ ನಾಯಕ ಎ. ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕರಾದ ವೀರೇಶ ಕುರಹಟ್ಟಿ, ರಾಜೇಶ್ವರಿ ದುಂಡಸಿ, ಭೀಮಾರತಿ ತೀರ್ಥ, ಡಾ. ಕವಿತಾ ಗಡ್ಡದಗೂಳಿ, ರತ್ನವ್ವ ಹಾದಿಮನಿ, ಎಂ.ಎನ್. ಸೂರಣಗಿ, ರೇಖಾ ಶಿಡೇನೂರ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.