

ದೇಶದಲ್ಲಿ ಸೋಂಕಿತರ ಸಂಖ್ಯೆ 5 ಸಾವಿರದ ಗಡಿ ದಾಟಿದೆ. ಮಂಗಳವಾರ ಹೊಸದಾಗಿ 421 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 5,212ಕ್ಕೆ ಏರಿದೆ. ಜತೆಗೆ 16 ಜನರು ಸಾವನ್ನಪ್ಪಿದ್ದು, ಮೃತಪಟ್ಟವರ ಒಟ್ಟು ಸಂಖ್ಯೆ 150ಕ್ಕೆ ಏರಿಕೆಯಾಗಿದೆ. ಸದ್ಯ 4,641 ಪ್ರಕರಣಗಳು ಸಕ್ರಿಯವಾಗಿದ್ದು, ಈವರೆಗೆ 421 ಜನರು ಗುಣಮುಖರಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಮಂಗಳವಾರ 8 ಜನರು
ಸಾವನ್ನಪ್ಪಿದ್ದು, ಒಟ್ಟು ಸಂಖ್ಯೆ 60ಕ್ಕೆ ಏರಿದೆ. ಈ ಮೂಲಕ ದೇಶದಲ್ಲಿ ಅತೀ ಹೆಚ್ಚು ಜನರು ಸಾವನ್ನಪ್ಪಿದ ಹಾಗೂ ಅತೀ ಹೆಚ್ಚು ಸೋಂಕಿತರನ್ನು ಒಳಗೊಂಡ ರಾಜ್ಯ ಮಹಾರಾಷ್ಟ್ರವಾಗಿದೆ. ನಂತರದ ಸ್ಥಾನಗಳಲ್ಲಿ ತಮಿಳುನಾಡು, ದೆಹಲಿ, ತೆಲಂಗಾಣ, ಉತ್ತರಪ್ರದೇಶ ರಾಜ್ಯಗಳಿವೆ. ವಿಶ್ವದಾದ್ಯಂತ ಕಳೆದ 24 ತಾಸಿನಲ್ಲಿ 3,659 ಜನರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 78,226ಕ್ಕೆ ಏರಿಕೆಯಾಗಿದೆ.
ಹೊಸದಾಗಿ 34,393 ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 13,80,211ಕ್ಕೆ ಏರಿದೆ. ಜಗತ್ತಿನಾದ್ಯಂತ ಈವರೆಗೆ 2,93,879 ಜನರು ಗುಣಮುಖರಾಗಿದ್ದು, 47,618 ಜನರ ಸ್ಥಿತಿ ಗಂಭೀರವಾಗಿದೆ.