ಈ ದಿನಾಂಕಗಳಲ್ಲಿ ಜನಿಸಿದವರಿಗೆ ಜನ್ಮದಲ್ಲಿ ಲಕ್ಷಾಧಿಪತಿಯಾಗುವ ಯೋಗವಿದೆ! ನೀವೂ ಹುಟ್ಟಿದ್ದು ಇದೇ ದಿನಾನಾ? Numerology

Numerology
Published on

Numerology: ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು ಕೂಡ ಇದ್ದಾರೆ. ಪ್ರತಿಯೊಂದು ಕೆಲಸ, ಕಾರ್ಯಗಳನ್ನು ಮಾಡಬೇಕಾದರೂ ಜೋತಿಷ್ಯದ ಮೊರೆ ಹೋಗುತ್ತಾರೆ. ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ ಒಂದು.

ಸಂಖ್ಯಾಶಾಸ್ತ್ರದ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು ಅವನ ಭವಿಷ್ಯ ಹೇಗಿರುತ್ತದೆ ಎಂಬುದನ್ನು ತಿಳಿಸುತ್ತದೆ. ಅಲ್ಲದೆ, ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಪ್ರಮುಖ ಅಂಶಗಳ ಬಗ್ಗೆ ಮುನ್ಸೂಚನೆ ಸಹ ನೀಡುತ್ತದೆ. ಸಂಖ್ಯೆಗಳು ನೈಸರ್ಗಿಕವಾಗಿ ವಿಶ್ವದಲ್ಲಿ ವಿಶಿಷ್ಟ ಶಕ್ತಿಯನ್ನು ಹೊಂದಿವೆ. ಈ ಸಂಖ್ಯೆಗಳು ಯಾರನ್ನಾದರೂ ಮೇಲಕ್ಕೇರಿಸಬಹುದು ಮತ್ತು ಕೆಳಗಿಳಿಸಬಹುದು.

Numerology

ಅಂದಹಾಗೆ ಸಂಖ್ಯಾಶಾಸ್ತ್ರವನ್ನು ರಾಡಿಕ್ಸ್ ಸಂಖ್ಯೆಗಳ ಆಧಾರದ ಮೇಲೆ ಹೇಳಲಾಗುತ್ತದೆ. ಒಬ್ಬ ವ್ಯಕ್ತಿಯ ಜನ್ಮ ದಿನಾಂಕದ ಮೊತ್ತವನ್ನು ರಾಡಿಕ್ಸ್ ಸಂಖ್ಯೆ ಅಥವಾ ಮೂಲಾಂಕ ಎಂದು ಕರೆಯಲಾಗುತ್ತದೆ. ಉದಾಹರಣೆಗೆ ಒಬ್ಬ 24ನೇ ತಾರೀಖಿನಂದು ಜನಿಸಿದರೆ ಆತನ ರಾಡಿಕ್ಸ್​ ಸಂಖ್ಯೆ 2+4= 6 ಆಗಿರುತ್ತದೆ. ರಾಶಿಗಳಂತೆ ರಾಡಿಕ್ಸ್​ ಸಂಖ್ಯೆಗಳು ಕೂಡ ಗ್ರಹಗಳೊಂದಿಗೆ ಸಂಬಂಧ ಹೊಂದಿವೆ. ಸಂಖ್ಯಾಶಾಸ್ತ್ರದಲ್ಲಿ 01 ರಿಂದ 09ರವರೆಗಿನ ಸಂಖ್ಯೆಗಳನ್ನು ರಾಡಿಕ್ಸ್ ಸಂಖ್ಯೆಗಳು ಎಂದು ಹೇಳಲಾಗುತ್ತದೆ. ಈ ಒಂಬತ್ತು ರಾಡಿಕ್ಸ್ ಸಂಖ್ಯೆಗಳು ಕೂಡ ನವಗ್ರಹಗಳಲ್ಲಿ ಒಂದೊಂದು ಗ್ರಹಗಳಿಗೆ ಸೀಮಿತವಾಗಿವೆ.

ಸಂಖ್ಯಾಶಾಸ್ತ್ರದ ಪ್ರಕಾರ, ಕೆಲ ನಿರ್ದಿಷ್ಟ ದಿನಾಂಕಗಳಲ್ಲಿ ಜನಿಸಿದವರಿಗೆ ಜನ್ಮದಲ್ಲಿ ಲಕ್ಷಾಧಿಪತಿಯಾಗುವ ಯೋಗವಿದೆ. ಅಲ್ಲದೆ, ತಮ್ಮ ಜೀವನದುದ್ದಕ್ಕೂ ಹಣದ ಕೊರತೆಯಿಲ್ಲದೆ ಸಂಪತ್ತು ಮತ್ತು ಸಮೃದ್ಧಿಯೊಂದಿಗೆ ಬದುಕುತ್ತಾರೆ. ಹೀಗಾಗಿ ರಾಡಿಕ್ಸ್​ ಸಂಖ್ಯೆ 9 ಅಂದರೆ, ದಿನಾಂಕ 9, 18 ಮತ್ತು 27ರಂದು ಜನಿಸಿದರೆ, ಅವರ ಮುಂದಿನ ಜೀವನ ಮತ್ತು ಆರ್ಥಿಕ ಸ್ಥಿತಿ ಹೇಗಿರುತ್ತದೆ ಎಂಬುದನ್ನು ಈ ಪೋಸ್ಟ್‌ನಲ್ಲಿ ನೋಡಬಹುದು.

Numerology 1

ಭವಿಷ್ಯದ ಜೀವನ

ಈ ದಿನಾಂಕಗಳಲ್ಲಿ ಜನಿಸಿದ ಜನರು ತಮ್ಮ ಜೀವನದಲ್ಲಿ ಎಂದಿಗೂ ಆರ್ಥಿಕ ತೊಂದರೆಗಳನ್ನು ಎದುರಿಸುವುದಿಲ್ಲ. ಅವರು ತಮ್ಮ ಜೀವನದುದ್ದಕ್ಕೂ ಸಂಪತ್ತು ಮತ್ತು ಐಷಾರಾಮಿ ಜೀವನದಿಂದ ಆಶೀರ್ವದಿಸಲ್ಪಡುತ್ತಾರೆ.

ಸಂಖ್ಯಾಶಾಸ್ತ್ರದ ಪ್ರಕಾರ, 9 ಅನ್ನು ತಮ್ಮ ಮೂಲ ಸಂಖ್ಯೆಯಾಗಿ ಹೊಂದಿರುವ ಜನರು ಹೆಚ್ಚು ಬುದ್ಧಿವಂತರು ಮತ್ತು ಅತ್ಯುತ್ತಮ ಹಣಕಾಸು ನಿರ್ವಹಣೆ ಕೌಶಲ್ಯಗಳನ್ನು ಹೊಂದಿರುತ್ತಾರೆ. ಅವರು ಬಯಸಿದ್ದನ್ನು ಸಾಧಿಸಲು ಯಾವುದೇ ಹಂತಕ್ಕೆ ಹೋಗುವ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಅವರು ಸಾಮಾನ್ಯವಾಗಿ ಉನ್ನತ ಸ್ಥಾನಗಳನ್ನು ಹೊಂದಿರುತ್ತಾರೆ. ವ್ಯಾಪಾರ ಮತ್ತು ವೃತ್ತಿಪರ ವಿಷಯಗಳಲ್ಲಿ ಕಠಿಣ ಪರಿಶ್ರಮ ವಹಿಸುತ್ತಾರೆ.

Numerology

9ನೇ ಸಂಖ್ಯೆಯ ಜನರು ಸಂಪತ್ತನ್ನು ಗಳಿಸುವಲ್ಲಿ ಪ್ರವೀಣರಾಗಿರುತ್ತಾರೆ. ಆದರೆ, ಯಾರಿಗಾಗಿಯೂ ತಮ್ಮ ಸ್ವಂತ ಹಿತಾಸಕ್ತಿಗಳನ್ನು ತ್ಯಾಗ ಮಾಡುವುದಿಲ್ಲ. ಸದಾ ಸ್ವತಂತ್ರ ಜೀವನ ನಡೆಸಲು ನಿರ್ಧರಿಸಿರುತ್ತಾರೆ. ತಮ್ಮ ಜೀವನದಲ್ಲಿ ಯಾರ ಹಸ್ತಕ್ಷೇಪವನ್ನು ಅವರು ಬಯಸುವುದಿಲ್ಲ ಮತ್ತು ಸಹಜವಾಗಿಯೇ ರಾಜನಂತೆ ಬದುಕುವ ಗುಣ ಹೊಂದಿರುತ್ತಾರೆ. ಹಣ ಮತ್ತು ಕೀರ್ತಿ ಅವರನ್ನು ಹುಡುಕಿಕೊಂಡು ಬರುತ್ತಲೇ ಇರುತ್ತದೆ.

ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್​ಸೈಟ್​ ಜವಾಬ್ದಾರರಾಗಿರುವುದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net