

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಸಂಖ್ಯೆಗಳು ನಮ್ಮ ಜೀವನದ ಎಲ್ಲ ವಿಷಯಗಳೊಂದಿಗೆ ಆಳವಾದ ಸಂಬಂಧವನ್ನು ಹೊಂದಿವೆ. ಅಲ್ಲದೆ, ಈ ಸಂಖ್ಯೆಗಳು ನೈಸರ್ಗಿಕವಾಗಿ ವಿಶ್ವದಲ್ಲಿ ವಿಶಿಷ್ಟ ಶಕ್ತಿಯನ್ನು ಹೊಂದಿದ್ದು, ಯಾರನ್ನಾದರೂ ಮೇಲಕ್ಕೇರಿಸಬಹುದು ಮತ್ತು ಕೆಳಗಿಳಿಸಬಹುದು.
ಅಂದಹಾಗೆ ಸಂಖ್ಯಾಶಾಸ್ತ್ರವು ವ್ಯಕ್ತಿಯ ಹೆಸರು, ಆತನ ಹುಟ್ಟಿದ ದಿನಾಂಕ, ತಿಂಗಳು, ವರ್ಷದ ಆಧಾರದ ಮೇಲೆ ಅವರ ಭವಿಷ್ಯದ ಜೀವನ ಹೇಗಿರುತ್ತದೆ ಎಂದು ಊಹಿಸುವ ವಿಜ್ಞಾನವಾಗಿದೆ. ಈ ಸಂಖ್ಯಾಶಾಸ್ತ್ರವನ್ನು ರಾಡಿಕ್ಸ್ ಸಂಖ್ಯೆಗಳ ಆಧಾರದ ಮೇಲೆ ಹೇಳಲಾಗುತ್ತದೆ. ಒಬ್ಬ ವ್ಯಕ್ತಿಯ ಜನ್ಮ ದಿನಾಂಕದ ಮೊತ್ತವನ್ನು ರಾಡಿಕ್ಸ್ ಸಂಖ್ಯೆ ಅಥವಾ ಮೂಲಾಂಕ ಎಂದು ಕರೆಯಲಾಗುತ್ತದೆ. ಉದಾಹರಣೆಗೆ ಒಬ್ಬ 24ನೇ ತಾರೀಖಿನಂದು ಜನಿಸಿದರೆ ಆತನ ರಾಡಿಕ್ಸ್ ಸಂಖ್ಯೆ 2+4= 6 ಆಗಿರುತ್ತದೆ.
ರಾಶಿಗಳಂತೆ ರಾಡಿಕ್ಸ್ ಸಂಖ್ಯೆಗಳು ಕೂಡ ಗ್ರಹಗಳೊಂದಿಗೆ ಸಂಬಂಧ ಹೊಂದಿವೆ. ಸಂಖ್ಯಾಶಾಸ್ತ್ರದಲ್ಲಿ 01 ರಿಂದ 09ರವರೆಗಿನ ಸಂಖ್ಯೆಗಳನ್ನು ರಾಡಿಕ್ಸ್ ಸಂಖ್ಯೆಗಳು ಎಂದು ಹೇಳಲಾಗುತ್ತದೆ. ಈ ಒಂಬತ್ತು ರಾಡಿಕ್ಸ್ ಸಂಖ್ಯೆಗಳು ಕೂಡ ನವಗ್ರಹಗಳಲ್ಲಿ ಒಂದೊಂದು ಗ್ರಹಗಳಿಗೆ ಸೀಮಿತವಾಗಿವೆ.
ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ದಿನಾಂಕಗಳಲ್ಲಿ ಜನಿಸಿದ ಜನರು ಸ್ವಾರ್ಥಿಗಳಾಗಿರುತ್ತಾರೆ. ನೀವು ಅವರೊಂದಿಗೆ ಸ್ವಲ್ಪ ಜಾಗರೂಕರಾಗಿರಬೇಕು. ಅಂತಹ ಜನರು ಯಾವ ದಿನಾಂಕಗಳಲ್ಲಿ ಜನಿಸುತ್ತಾರೆ ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.
ಸಂಖ್ಯಾಶಾಸ್ತ್ರದ ಪ್ರಕಾರ, 8, 17 ಮತ್ತು 26ನೇ ತಾರೀಖಿನಂದು ಜನಿಸಿದ ಜನರು ತುಂಬಾ ಸ್ವಾರ್ಥಿಗಳು. ಅವರ ಆಡಳಿತ ಗ್ರಹ ಶನಿಯಾಗಿರುವುದರಿಂದ, ಅವರು ಇತರರ ಅಭಿಪ್ರಾಯಗಳಿಗೆ ಪ್ರಾಮುಖ್ಯತೆ ನೀಡುವುದಿಲ್ಲ. ಅವರು ಕಠಿಣ ಪರಿಶ್ರಮಿಗಳಾಗಿರುವುದರಿಂದ, ಅವರು ಬಹಳಷ್ಟು ದುರಹಂಕಾರವನ್ನು ಹೊಂದಿರುತ್ತಾರೆ. ಅವರು ತರ್ಕಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಅವರು ಹಣದ ಬಗ್ಗೆ ಜಾಗರೂಕರಾಗಿರುತ್ತಾರೆ. ಹೀಗಾಗಿ, ಅವರು ಸ್ವಾರ್ಥ ಚಿಂತನೆಗೆ ಗುರಿಯಾಗುತ್ತಾರೆ.
ಸಂಖ್ಯಾಶಾಸ್ತ್ರದ ಪ್ರಕಾರ, 7, 16 ಮತ್ತು 25ನೇ ತಾರೀಖಿನಂದು ಜನಿಸಿದ ಜನರು ಸ್ವಾರ್ಥಿಗಳು. ಕೇತುವಿನ ಪ್ರಭಾವದಿಂದಾಗಿ ಅವರು ಅಂತರ್ಮುಖಿಗಳಾಗಿರುತ್ತಾರೆ. ಅವರು ಯಾವುದನ್ನೂ ಬೇಗನೆ ವ್ಯಕ್ತಪಡಿಸುವುದಿಲ್ಲ. ಅವರು ತಮ್ಮ ನಂಬಿಕೆಯ ಮಾರ್ಗವನ್ನು ಮಾತ್ರ ಅನುಸರಿಸುತ್ತಾರೆ. ಅವರು ಇತರರ ಭಾವನೆಗಳನ್ನು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಏನು ಮಾಡಿದರೂ ಹಣ ಸಿಗುತ್ತದೆಯೇ ಎಂದು ಯಾವಾಗಲೂ ನೋಡುತ್ತಾರೆ. ಇತರರು ನೊಂದುಕೊಳ್ಳುತ್ತಾರೆ ಅನ್ನೋದರ ಬಗ್ಗೆ ಅವರೆಂದಿಗೂ ಚಿಂತಿಸುವುದಿಲ್ಲ.
ಸಂಖ್ಯಾಶಾಸ್ತ್ರದ ಪ್ರಕಾರ, 1, 10 ಮತ್ತು 28ನೇ ತಾರೀಖಿನಂದು ಜನಿಸಿದ ಜನರು ತುಂಬಾ ಸ್ವಾರ್ಥಿಗಳಾಗಿರುತ್ತಾರೆ. ಸೂರ್ಯನ ಬಲವಾದ ಪ್ರಭಾವದಿಂದಾಗಿ ಅವರು ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ. ಅವರು ಯಾವಾಗಲೂ ತಮ್ಮ ಸ್ವಂತ ಅಭಿಪ್ರಾಯಗಳಿಗೆ ಮಾತ್ರ ಪ್ರಾಮುಖ್ಯತೆ ನೀಡುತ್ತಾರೆ. ಅವರು ತಮ್ಮ ಸ್ವಂತ ಹಿತಾಸಕ್ತಿಗಳನ್ನು ನೋಡಿಕೊಂಡ ನಂತರವೇ ಇತರರ ಬಗ್ಗೆ ಯೋಚಿಸುತ್ತಾರೆ.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್ಸೈಟ್ ಜವಾಬ್ದಾರರಾಗಿರುವುದಿಲ್ಲ.