ಕೆಲಸಕ್ಕೆ ಸೇರಿದ ಒಂದೇ ದಿನಕ್ಕೆ ಆಸ್ಪತ್ರೆ ಕಟ್ಟಡದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ನರ್ಸ್​! ಕುಟುಂಬಸ್ಥರಿಂದ ಅತ್ಯಾಚಾರ ಆರೋಪ

Women Beaten
Published on

ಲಖನೌ: ಕೆಲಸಕ್ಕೆ ಹಾಜರಾದ ಒಂದೇ ದಿನಕ್ಕೇ ನೇಣು ಬಿಗಿದ ಸ್ಥಿತಿಯಲ್ಲಿ ನರ್ಸ್​ ಶವ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಉನ್ನಾವ್​ನಲ್ಲಿ ನಡೆದಿದೆ.

ಮಹಿಳೆಯು ಶುಕ್ರವಾರವಷ್ಟೇ ಖಾಸಗಿ ಆಸ್ಪತ್ರೆಗೆ ನರ್ಸ್​ ಆಗಿ ಕೆಲಸಕ್ಕೆ ಸೇರಿದ್ದಳು. ಆದರೆ ಮಾರನೇ ದಿನವೇ ಅದೇ ಕಟ್ಟಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ.

ಈ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು, ಅತ್ಯಾಚಾರವಾಗಿರುವುದು ಇನ್ನೂ ದೃಢವಾಗಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ತಿಳಿಯಲಿದ್ದು, ಸದ್ಯ ಮೂವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಆರೋಪಿತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇನ್ನು ಈ ಆಸ್ಪತ್ರೆ ಪ್ರಾರಂಭವಾಗಿ ಕೇವಲ ಐದು ದಿನಗಳಾಗಿತ್ತು ಎಂದು ಹಿರಿಯ ಪೊಲೀಸ್​ ಅಧಿಕಾರಿ ಶಶಿ ಶೇಖರ್​ ಸಿಂಗ್​ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net