ಪರಿಸರ ಸಂರಕ್ಷಣೆಗಾಗಿ ಗಿಡ-ಮರಗಳನ್ನು ಪೋಷಿಸಿ

1-KGL-1,,,,
ಕೊಳ್ಳೇಗಾಲದ ಆದರ್ಶ ಶಾಲೆಯ ಆವರಣದಲ್ಲಿ ಶುಕ್ರವಾರ ಮಲೆ ಮಹದೇಶ್ವರ ವನ್ಯಜೀವಿ ವಿಭಾಗ ಕೊಳ್ಳೇಗಾಲ ಹಾಗೂ ಸಾಮಾಜಿಕ ಅರಣ್ಯ ವಿಭಾಗ ಚಾಮರಾಜನಗರ ವತಿಯಿಂದ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಭಾಸ್ಕರ್, ಚಂದ್ರು, ರಾಜೇಂದ್ರ, ಸುರೇಶ್, ನಾಗಸುಂದ್ರಮ್ಮ, ಪ್ರಕಾಶ್, ಪ್ರಿಯದರ್ಶಿನಿ ಇದ್ದರು.
Published on

ಕೊಳ್ಳೇಗಾಲ: ಪರಿಸರ ಸಂರಕ್ಷಣೆಗಾಗಿ ಗಿಡ, ಮರಗಳನ್ನು ಫೋಷಣೆ ಮಾಡಬೇಕು ಎಂದು ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.

ಪಟ್ಟಣದ ಆದರ್ಶ ಶಾಲೆಯ ಆವರಣದಲ್ಲಿ ಶುಕ್ರವಾರ ಮಲೆಮಹದೇಶ್ವರ ವನ್ಯಜೀವಿ ವಿಭಾಗ ಕೊಳ್ಳೇಗಾಲ ಹಾಗೂ ಸಾಮಾಜಿಕ ಅರಣ್ಯ ವಿಭಾಗ ಚಾಮರಾಜ ನಗರ ವತಿಯಿಂದ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾಮಾಜಿಕ ಅರಣ್ಯ ಇಲಾಖೆ ಗಿಡ, ಮರಗಳನ್ನು ಬೆಳೆಸುತ್ತಿದೆ. ಅರಣ್ಯ ಇಲಾಖೆಯಲ್ಲಿ ಕೆಳ ಹಂತದ ಸಿಬ್ಬಂದಿ, ನೌಕರರ ಕೊರತೆಯಿದೆ. ಈಗಾದರೆ ಅರಣ್ಯ ಸಂರಕ್ಷಣೆ ಯಾವ ರೀತಿ ಮಾಡುವುದು ಎಂಬ ಪ್ರಶ್ನೆ ಮೂಡುತ್ತದೆ. ಮಕ್ಕಳು ಪರಿಸರದ ಬಗ್ಗೆ ಕಾಳಜಿವ ವಹಿಸಬೇಕು. ಮನೆಗಳ ಆವರಣದಲ್ಲಿ ಗಿಡವನ್ನು ಬೆಳೆಸಬೇಕು. ನಗರ, ಪಟ್ಟಣ ಪ್ರದೇಶದ ಮಕ್ಕಳಂತೆಯೇ ಗ್ರಾಮೀಣ ಭಾಗದ ಮಕ್ಕಳು ಶೈಕ್ಷಣಿಕವಾಗಿ ಮುಂದುವರಿಯಬೇಕೆಂದು ಸರ್ಕಾರ ಹಲವು ಯೋಜನೆಗಳನ್ನು ರೂಪಿಸುತ್ತಿದೆ ಎಂದರು.

ಚಾಮರಾಜನಗರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರು, ತಾಲೂಕು ಅಧ್ಯಕ್ಷ ರಾಜೇಂದ್ರ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಸದಸ್ಯೆ ನಾಗಸುಂದ್ರಮ್ಮ, ಪ್ರಕಾಶ್, ರಾಮಕೃಷ್ಣ, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಅರಣ್ಯ ಉಪ ಸಂರಕ್ಷಣಾಧಿಕಾರಿ ಭಾಸ್ಕರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಕ್ಷಯ್‌ಕುಮಾರ್, ಚಾಮರಾಜನಗರ ಎಸಿಎಫ್ ಸಂದೀಪ್, ವಲಯ ಅರಣ್ಯಾಧಿಕಾರಿ ರವಿಕುಮಾರ ಪುರಾಣಿಕಮಠ, ಸಾಮಾಜಿಕ ಅರಣ್ಯ ವಲಯಾಧಿಕಾರಿ ಕೆ.ಪಿ ಪ್ರಫುಲ್ಲ, ಬಿಆರ್‌ಟಿ ವಲಯ ಅಧಿಕಾರಿ ವಾಸು, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಆದರ್ಶ ಶಾಲೆಯ ಮುಖ್ಯಶಿಕ್ಷಕಿ ಪ್ರಿಯದರ್ಶಿನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಎಸ್‌ಡಿಎಂಸಿ ಅಧ್ಯಕ್ಷ ಲಿಂಗರಾಜು, ಉಪಾಧ್ಯಕ್ಷೆ ವನಿತಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net