ಶಾಸಕ ಸ್ಥಾನಕ್ಕೆ ಗುಡ್​ಬೈ ಹೇಳಿದ ಕೂಡ್ಲಿಗಿಯ ಎನ್​ವೈ ಗೋಪಾಲಕೃಷ್ಣ

bjp resignation
Published on

ವಿಜಯನಗರ: ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಶಾಸಕ ಎನ್​ವೈ ಗೋಪಾಲಕೃಷ್ಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಎನ್​ವೈ ಗೋಪಾಲಕೃಷ್ಣ ಈ ಹಿಂದೆಯೇ ಕಾಂಗ್ರೆಸ್ ಬಾಗಿಲು ಬಡಿದಿದ್ದರು ಎನ್ನಲಾಗಿದೆ. ಸದ್ಯ ಅವರು ಮೊಳಕಾಲ್ಮೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೇಟ್ ಕೇಳಿದ್ದಾರೆ ಎನ್ನಲಾಗಿದೆ. ಈ ಹಿಂದೆಯೂ ಅವರು ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿದ್ದರು.

ಅವರು ಶಿರಸಿಯಲ್ಲಿ ಸ್ಪೀಕರ್ ಕಾಗೇರಿಯವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ಈ ಹಿಂದೆ ಮೊಳಕಾಲ್ಮೂರಿನಿಂದ ನಾಲ್ಕು ಬಾರಿ ಮತ್ತು ಬಳ್ಳಾರಿ ಗ್ರಾಮಾಂತರ ಕ್ಷೇತ್ರದ 2014ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆದ್ದಿದ್ದರು. 2018 ರಲ್ಲಿ ಮತ್ತೊಮ್ಮೆ ಮೊಳಕಾಲ್ಮೂರಿನಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ನಿರಾಕರಿಸಿದ ಹಿನ್ನಲೆ ಬಿಜೆಪಿ ಸೇರ್ಪಡೆಯಾಗಿದ್ದರು.

ಅವರು ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ಪ್ರಭಾವದಿಂದಾಗಿ ಕೂಡ್ಲಿಗಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿ, ಭರ್ಜರಿ ಗೆಲುವು ಸಾಧಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net