

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಾಕಾರಿ ಬರಹ ಹಾಕಿದ್ದ ಇಬ್ಬರ ವಿರುದ್ಧ ಕಬ್ಬನ್ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕರೊನಾ ಸೋಂಕು ತಗುಲಿದ್ದರಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಅವರ ಫೋಟೋವನ್ನು ಫೇಸ್ಬುಕ್ನಲ್ಲಿ ಶೇರ್ ಮಾಡಿದ ಕಿಡಿಗೇಡಿಗಳಿಬ್ಬರು ಸಿದ್ದರಾಮಯ್ಯಗೆ ನಿಂದಿಸಿದ್ದಾರೆ. ಅಲ್ಲದೆ 'RIP' ಎಂದೂ ಕಮೆಂಟ್ ಮಾಡಿ ಅಮಾನವೀಯವಾಗಿ ವರ್ತಿಸಿದ್ದಾರೆ.
ಇದನ್ನೂ ಓದಿರಿ ಸಿಎಂ ಯಡಿಯೂರಪ್ಪಗೆ ವರ್ಕ್ ಫ್ರಮ್ ಹಾಸ್ಪಿಟಲ್
ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ ಮಂಜು ಮತ್ತು ಆನಂದ್ ಕುಮಾರ್ ಎಂಬುವವರ ವಿರುದ್ಧ ಕಾಂಗ್ರೆಸ್ ಲೀಗಲ್ ಟೀಂ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿದೆ.
ಎರಡು ದಿನಗಳ ಹಿಂದಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೂ ಕರೊನಾ ಸೋಂಕು ದೃಢಪಟ್ಟಿತ್ತು. ಈ ಸಂಬಂಧ ಅಮಿತ್ ಷಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಬರಹ ಹಾಕಿದ್ದ ಆರೋಪದಡಿ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಸದಸ್ಯರೊಬ್ಬರನ್ನು ಪೊಲೀಸರು ಬಂಧಿಸಿದ್ದರು.