ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಕೀ ಉತ್ತರಗಳಿಗೆ ಆಕ್ಷೇಪಣೆಗೆ ಅವಕಾಶ

SSLC Exam
Published on

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವಿಷಯವಾರು ಕೀ ಉತ್ತರಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ತಮ್ಮ ಆಕ್ಷೇಪಣೆಗಳನ್ನು ಏ.6ರ ಸಂಜೆ 5.30ರೊಳಗೆ ಸಲ್ಲಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.

ಮಂಡಳಿಯ ಜಾಲತಾಣದ ಲಿಂಕ್ http://kseab.karnataka.gov.in ಅನ್ನು ಬಳಸಿ ಆಕ್ಷೇಪಣೆಗಳನ್ನು ಸಲ್ಲಿಸಬೇಕು. ನಿಗದಿತ ಸಮಯದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net