Obscene comment against Hindu deities

Crime Logo
Published on

ಬೆಂಗಳೂರು: ಹಿಂದೂ ದೇವತೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಅಶ್ಲೀಲ ಪದ ಬಳಸಿ ಕಮೆಂಟ್ ಹಾಕಿರುವ ಕಿಡಿಗೇಡಿ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಬಿ.ಎಸ್.ರಾಘವೇಂದ್ರ ಭಟ್ ಎಂಬುವರು ನೀಡಿದ ದೂರಿನ ಮೇರೆಗೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಅಂಜುಂ ಶೇಕ್ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ಕಿಡಿಗೇಡಿಗಾಗಿ ಶೋಧ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅಂಜುಂ ಶೇಕ್ ಎಂಬಾತ ಶೃಂಗೇರಿ ಶಾರದಾಂಬೆ, ಕೊಲ್ಲೂರು ಮುಕಾಂಬಿಕೆ, ತಿರುಪತಿ ತಿಮ್ಮಪ್ಪ, ಹೊರನಾಡು ಅನ್ನಪೂರ್ಣೇಶ್ವರಿ, ಕಟೀಲು ದುರ್ಗಾಪರಮೇಶ್ವರಿ ಮತ್ತು ಗಣಪತಿ ದೇವರುಗಳ ಬಗ್ಗೆ ಅಶ್ಲೀಲ ಪದ ಬಳಿಸಿ ಕಮೆಂಟ್ ಮಾಡಿದ್ದಾನೆ. ಅದರಿಂದ ಹಿಂದೂ ಸಮುದಾಯವರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ಅಲ್ಲದೆ, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಕೋಮುದ್ವೇಷ ಹುಟ್ಟಿ ಹಾಕುವ ಉದ್ದೇಶದಿಂದ ಈ ರೀತಿಯ ಕಮೆಂಟ್ ಮಾಡಿದ್ದಾನೆ. ಅದರಿಂದ ಹಿಂದೂ ಧರ್ಮದ ದೇವತೆಗಳ ವಿರುದ್ಧ ಅವಹೇಳನಕಾರಿ ಕಮೆಂಟ್ ಮಾಡಿರುವ ಅಂಜುಂ ಶೇಕ್ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ರಾಘವೇಂದ್ರ ಭಟ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net