ತಮ್ಮ ಮನೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ಧಾರಾವಾಹಿ ನಟಿ

jtyreyty
Published on

ಭುವನೇಶ್ವರ: ಒಡಿಯಾ ಕಿರುತೆರೆ ನಟಿ ರಶ್ಮಿರೇಖಾ ಓಜಾ ಜೂನ್ 18 ರಂದು ನಗರದ ನಯಾಪಲ್ಲಿ ಪೊಲೀಸ್ ವ್ಯಾಪ್ತಿಯ ಗಡಸಾಹಿ ಪ್ರದೇಶದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ರಾತ್ರಿ 10.30ರ ಸುಮಾರಿಗೆ ನಟಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ.
ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಶವದ ಬಳಿ ಮೇಜಿನ ಮೇಲೆ ಡೆತ್​ ನೋಟ್​ ಪತ್ತೆ ಆಗಿದೆ. ಈ ಟಿಪ್ಪಣಿಯನ್ನು ನಟಿಯೇ ಬರೆದಿದ್ದಾರಾ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಡೆತ್​ನೋಟ್​ನಲ್ಲಿ ನನ್ನ ಸಾವಿಗೆ ನಾನೆ ಕಾರಣ ಎಂದು ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಮಿತಿ ಕಹಿಬಿ ಕಹಾ ಧಾರಾವಾಹಿಯಿಂದ ಜನಪ್ರಿಯರಾಗಿದ್ದ ರಶ್ಮಿರೇಖಾ ಓಜಾ, ಮೂಲತಃ ಜಗತ್‌ಸಿಂಗ್‌ಪುರ ಜಿಲ್ಲೆಯ ಸಂಕೇತ್‌ಪಟಾನಾದವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net