ಮೊದಲ-ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಬಿಇ ವಿದ್ಯಾರ್ಥಿಗಳಿಗೂ ಆಫ್​ಲೈನ್​ ಕ್ಲಾಸ್​ ಆರಂಭ

ಮೊದಲ-ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಬಿಇ ವಿದ್ಯಾರ್ಥಿಗಳಿಗೂ ಆಫ್​ಲೈನ್​ ಕ್ಲಾಸ್​ ಆರಂಭ
Published on

ಬೆಂಗಳೂರು: ಕೋವಿಡ್​ ಸೋಂಕಿನ ಭೀತಿ ನಡುವೆಯೂ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿದೆ. ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಮತ್ತು ಇಂಜಿನಿಯರಿಂಗ್‌ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿ ನಡೆಯುತ್ತಿದ್ದು, ಮೊದಲ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಫ್​ಲೈನ್​ ತರಗತಿ ಆರಂಭವೇ ಆಗಿಲ್ಲ.

ಇದೀಗ ಈ ವಿದ್ಯಾರ್ಥಿಗಳಿಗೂ ಆಫ್​ಲೈನ್​ ತರಗತಿ ಶೀಘ್ರವೇ ಆರಂಭಗೊಳ್ಳಲಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ​ ಅವರು ಶುಕ್ರವಾರ ಎಲ್ಲ ವಿವಿ ಕುಲಪತಿಗಳ ಜತೆಗಿನ ವಿಡಿಯೋ ಕಾನ್ಫರೆನ್ಸ್​ನಲ್ಲಿ ಪ್ರಕಟಿಸಿದರು. ಇದನ್ನೂ ಓದಿರಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲು

ಸಂಕ್ರಾಂತಿ ನಂತರ ಮೊದಲ ಮತ್ತು ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿ ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವರು ತಿಳಿಸಿದರು. ಈ ಸಂಬಂಧ ವರದಿ ನೀಡುವಂತೆ ಕುಲಪತಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಕುಲಪತಿಗಳೂ ನೇರ ತರಗತಿಗಳನ್ನು ಆರಂಭಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net