ಸ್ವ ಸಹಾಯ ಸಂಘಗಳಿಂದ ಜನರು ಸ್ವಾವಲಂಬನೆ

Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳಿಂದ ಗ್ರಾಮೀಣ ಭಾಗದ ಜನರು ಅಥವಾ ಸದಸ್ಯರು ಸ್ವಾವಲಂಬಿಗಳಾಗಿ ಬದುಕುತ್ತಿದ್ದಾರೆ. ಈ ಸಂಘದ ಕಾರ್ಯ ಶ್ಲಾಘನೀಯ ಎಂದು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್. ನಾಗರಾಜ್ ಶೆಟ್ಟಿ ಹೇಳಿದರು.

ಹೆಬ್ರಿಯ ಶ್ರೀ ಅನಂತ ಪದ್ಮನಾಭ ಸನ್ನಿಧಿ ಸಭಾ ಭವನದಲ್ಲಿ ಮಂಗಳವಾರ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಹಾಗೂ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಕಳ ತಾಲೂಕು ಕೇಂದ್ರ ಒಕ್ಕೂಟಗಳ ಸಮಿತಿ ಸ್ಥಾಪಕಾಧ್ಯಕ್ಷ ಶಾಂತಿರಾಜ್ ಜೈನ್ ಮಾತಾನಾಡಿದರು. ಹೆಬ್ರಿ ತಾಲೂಕು ಜನಜಾಗೃತಿ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಉದ್ಯಮಿ ಭಾಸ್ಕರ್ ಜೋಯಿಸ್, ಹೆಬ್ರಿ ತಾಲೂಕು ಕೇಂದ್ರ ಸಮಿತಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಹೆಗ್ಡೆ, ಶೌರ್ಯ ವಿಪತ್ತು ಘಟಕದ ಅಧ್ಯಕ್ಷ ಸುರೇಶ್ ಭಂಡಾರಿ, ಯೋಜನೆಯ ಪದಾಧಿಕಾರಿಗಳಾದ ನರೇಂದ್ರ ನಾಯಕ್, ಶಾಲಿನಿ ಭಂಡಾರಿ, ಯೋಗೀಶ್ ಮುದ್ರಾಡಿ, ಸಪ್ನಾ, ಹರೀಶ್ ಚೇರ್ಕಾಡಿ, ಪ್ರಗತಿ ಬಂಧು ಸ್ವ ಸಹಾಯ ಒಕ್ಕೂಟಗಳ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಯೋಜನಾಧಿಕಾರಿ ಲೀಲಾವತಿ ಸ್ವಾಗತಿಸಿದರು. ಮೇಲ್ವಿಚಾರಕ ಉದಯ ನಿರೂಪಿಸಿದರು. ಚಂದ್ರಾವತಿ, ಉಮೇಶ್, ಸೇವಾ ಪ್ರತಿನಿಧಿಗಳು ಸಹಕರಿಸಿದರು.

ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ

ಸಂಪನ್ಮೂಲ ವ್ಯಕ್ತಿಗಳಾಗಿದ್ದ ನಂದ ಕುಮಾರ್ ಹೆಗ್ಡೆ, ನಾಗರಾಜ ಶೆಟ್ಟಿ, ಬ್ಯಾಂಕ್ ಆಫ್ ಬರೋಡ ಹೆಬ್ರಿ ಶಾಖೆಯ ಪ್ರಬಂಧಕ ಪವನ್‌ಕುಮಾರ್ ಯೋಜನೆಗಳ ಸಹಿತ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net