ಹೃದಯಾಘಾತದಿಂದ ಅಧಿಕಾರಿ ಕಾರಿನಲ್ಲೇ ಸಾವು

5 gkp 06
Published on

ಗೋಣಿಕೊಪ್ಪಲು: ತಿತಿಮತಿಯಿಂದ ಪಿರಿಯಾಪಟ್ಟಣಕ್ಕೆ ಕಾರಿನಲ್ಲಿ ಶುಕ್ರವಾರ ಸಂಜೆ ಪ್ರಯಾಣಿಸುತ್ತಿದ್ದ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪೊನ್ನಂಪೇಟೆ ತಾಲೂಕು ಪಂಚಾಯಿತಿಯಲ್ಲಿ ಪ್ರಭಾರ ಯೋಜನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಮೂಲತಃ ಬೆಂಗಳೂರಿನವಾರದ ಮನಮೋಹನ್ (46) ಮೃತಪಟ್ಟವರು.

ಪಿರಿಯಾಪಟ್ಟಣಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಇವರು ಬೂದಿತಿಟ್ಟು ಬಳಿ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಕಾರು ಚಲಿಸುವಾಗಲೇ ಎದೆ ಹಿಡಿದುಕೊಂಡ ಅವರು ಕಾರನ್ನು ಪಕ್ಕಕ್ಕೆ ಸರಿಸಿ ನಿಲ್ಲಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net