ಅಧಿಕಾರಿಗಳ ವಿದೇಶ ಪ್ರವಾಸಕ್ಕೆ ನಿರ್ಬಂಧ ಹಾಕಿದ ಸಿಎಂ; ವಾರದೊಳಗೆ ಕಲಿಕೆ, ಅಧ್ಯಯನ ವರದಿ ಸಲ್ಲಿಸಲು ಸೂಚನೆ

CM Siddaramaiah
Published on

ಬೆಂಗಳೂರು:

ಸರ್ಕಾರಿ ಅಧಿಕಾರಿಗಳ ವಿದೇಶ ಪ್ರವಾಸಕ್ಕೆ ಮುಖ್ಯಮಂತ್ರಿಗಳು ನಿರ್ಬಂಧ ವಿಧಿಸಿದೆ. ಈ ಕ್ಷಣದಿಂದ ವರ್ಷಾಂತ್ಯದ ತನಕ ವಿದೇಶ ಪ್ರವಾಸ ಮಾಡುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

2024ನೇ ಸಾಲಿನ ಆಗಸ್ಟ್‌ನಿಂದ 2025ರ ಜುಲೈ ತಿಂಗಳವರೆಗೆ ಸರ್ಕಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಅಧಿಕೃತ ವಿದೇಶ ಪ್ರವಾಸ ಕೈಗೊಂಡಿದ್ದರೂ ಈ ತನಕ ಸರ್ಕಾರಕ್ಕೆ ವರದಿಗಳನ್ನು ಸಲ್ಲಿಸಿರುವುದೇ ಇರುವುದನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ.

ಅಧ್ಯಯನ ನಡೆಸಿ, ಕಲಿಕೆ ಹಾಗು ಶಿಫಾರಸ್ಸುಗಳೊಂದಿಗೆ ಸರ್ಕಾರಕ್ಕೆ ಅಧ್ಯಯನ ವರದಿಯನ್ನು ಸಲ್ಲಿಸದೆ ಇರುವವರು ಈ ಕೂಡಲೇ ಒಂದು ವಾರದೊಳಗೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಮುಂಬರುವ ದಿನಗಳಲ್ಲಿ ಅಧಿಕೃತ ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಪ್ರಸ್ತಾವನೆಯನ್ನು ಸಲ್ಲಿಸುವ ಮುನ್ನ ಕಡ್ಡಾಯವಾಗಿ ಈ ಹಿಂದೆ ಕೈಗೊಂಡಿರುವ ಪ್ರವಾಸಗಳ ಕಲಿಕೆ ಹಾಗೂ ಅನುಷ್ಠಾನ ವರದಿ ನೀಡಿದ್ದಲ್ಲಿ ಮಾತ್ರ ಹಾಲಿ ಪ್ರವಾಸದ ಪ್ರಸ್ತಾವನೆಗೆ ಅನುಮತಿ ನೀಡುವ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಸಾಲಿನ ಅಂತ್ಯದವರೆಗೂ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧಿಕೃತ ವಿದೇಶ ಪ್ರವಾಸಗಳನ್ನು ನಿರ್ಬಂಧಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net