23ರಂದು ಅಂಬೇಡ್ಕರ್ ಸಮುದಾಯ ಭವನ ಕಾಮಗಾರಿಗೆ ಚಾಲನೆ

20 SIDDAPPA-1
Published on

ಕೆ.ಆರ್.ನಗರ: ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿಗೆ ನ.23 ರಂದು ಚಾಲನೆ ಹಾಗೂ ಸಚಿವರು ಮತ್ತು ಶಾಸಕರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಜಿಪಂ ಮಾಜಿ ಸದಸ್ಯ ಸಿದ್ದಪ್ಪ ತಿಳಿಸಿದರು.

ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಸಮುದಾಯ ಭವನಕ್ಕೆ ನಿಗದಿಯಾಗಿರುವ ಸ್ಥಳದಲ್ಲಿ ನ.23ರಂದು ಬೆಳಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಮೈಸೂರಿನ ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ವಹಿಸಲಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಸ್.ಸಿ.ಮಹದೇವಪ್ಪ ನೆರವೇರಿಸಲಿದ್ದಾರೆ. ಶಾಸಕ ಡಿ.ರವಿಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಷ್, ವಿಧಾನ ಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಇನ್ನಿತರರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಕೆ.ಆರ್ .ನಗರ ಮತ್ತು ಸಾಲಿಗ್ರಾಮ ತಾಲೂಕುಗಳ ಸಮುದಾಯದ ಎಲ್ಲ ಚುನಾಯಿತ ಜನಪ್ರತಿನಿಧಿಗಳು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಸದಸ್ಯ ಅರ್ಜುನಹಳ್ಳಿ ರಾಜಯ್ಯ, ಕೆ.ಆರ್.ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ, ಕೆ.ಆರ್.ನಗರ ತಾಲೂಕು ಎಸ್‌ಸಿ ಘಟಕದ ಅಧ್ಯಕ್ಷ ಡಿ.ವಿ.ಗುಡಿ ನಂದೀಶ್, ಸಾಲಿಗ್ರಾಮ ತಾಲೂಕು ಎಸ್ಸಿ ಘಟಕದ ಅಧ್ಯಕ್ಷ ಕಂಠಿಕುಮಾರ್, ಪುರಸಭಾ ಸದಸ್ಯ ಶಂಕರ್‌ಸ್ವಾಮಿ, ಮುಖಂಡರಾದ ಹೊಸಕೋಟೆ ಚೆಲುವರಾಜ್, ಹನಸೋಗೆ ಸಿದ್ದಯ್ಯ ಎಸ್ಸಿಎಸ್‌ಟಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸ್ವಾಮಿ, ಗ್ರಾಪಂ ಸದಸ್ಯ ಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net