27 ರಂದು ವಿರಾಜಪೇಟೆ ಕೊಡವ ಸಮಾಜದ ಕೈಲ್‌ಪೊಳ್ದ್ ನಮ್ಮೆ

Published on

ವಿರಾಜಪೇಟೆ: ವಿರಾಜಪೇಟೆ ಕೊಡವ ಸಮಾಜದ ವತಿಯಿಂದ ವರ್ಷಪೂರ್ತಿ ನಡೆಸಿಕೊಂಡು ಬರುತ್ತಿರುವ ಕೈಲ್‌ಪೊಲ್ದ್ ನಮ್ಮೆಯನ್ನು ಸೆ. 27 ರಂದು ಭಾನುವಾರ ಕೊಡವ ಸಮಾಜ ಆವರಣದಲ್ಲಿ ಆಯೋಜಿಸಲಾಗುತ್ತದೆ ಎಂದು ಕೊಡವ ಸಮಾಜದ ಕ್ರೀಡಾ ಕಾರ್ಯದರ್ಶಿ ಅಮ್ಮಣಿಚಂಡ ರತ್ನಾ ಸುಬ್ರಮಣಿ ಹೇಳಿದರು.

ಮಹಿಳೆಯರಿಗೆ ಮತ್ತು ಪುರುಷರಿಗೆ ತೆಂಗಿನಕಾಯಿಗೆ ಗುಂಡು ಹೊಡೆಯುವುದು, ಹಗ್ಗಜಗ್ಗಾಟ, ವಾಲಗದ ಕುಣಿತ, ಭಾರದ ಗುಂಡು ಎಸೆತ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಪೂರ್ವಹ್ನ 9.30 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿಉತ್ತಪ್ಪ ಉದ್ಘಾಟಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ, ಉಪಾಧ್ಯಕ್ಷ ಕಾಣತಂಡ ಜಗದೀಶ್, ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್, ಮಾದೇಯಂಡ ಸಂಪಿ ಪೂಣಚ್ಚ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net